ದೇಶದಲ್ಲಿ ಇನ್ನೇನು ಹಬ್ಬಗಳು ಸಾಲು ಸಾಲಾಗಿ ಶುರುವಾಗುತ್ತಿವೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರಿ ನೌಕರಿಗೆ ಭರ್ಜರಿ ವೇತನ ಏರಿಕೆ ಮಾಡುವ ಸಾಧ್ಯತೆ ಇದೆ. 

ನವದೆಹಲಿ : ಇನ್ನೇನು ಹಬ್ಬಗಳು ಸಾಲು ಸಾಲಾಗಿ ಆಗಮಿಸುತ್ತಿದ್ದು ಇದೇ ವೇಳೆ ಕೇಂದ್ರ ಸರ್ಕಾರಿ ನೌಕರರಿಗೆ ಶುಭ ಸುದ್ದಿಯೊಂದು ಲಭ್ಯವಾಗುತ್ತಿದೆ. 7ನೇ ವೇತನ ಆಯೋಗದ ಅನ್ವಯದಂತೆ ಕೇಂದ್ರ ಸರ್ಕಾರದ 50 ಲಕ್ಷ ನೌಕರರಿಗೆ ದೀಪಾವಳಿ ಕೊಡುಗೆಯಾಗಿ ವೇತನ ಏರಿಕೆ ಜಾರಿಯಾಗುವ ಸಾಧ್ಯತೆ ಇದೆ. 

ಈ ಬಗ್ಗೆ ಕೇಂದ್ರ ಸರ್ಕಾರಿ ನೌಕರರು ಸರ್ಕಾರಕ್ಕೆ 7ನೇ ವೇತನದ ಆಯೋದಗದ ಅನ್ವಯ ಸಂಬಳ ಏರಿಕೆ ಮಾಡಲು ಮನವಿ ಸಲ್ಲಿಸಿದ್ದಾರೆ. 

ಹಣಕಾಸು ಖಾತೆ ರಾಜ್ಯ ಸಚಿವ ಪಿ. ರಾಧಾಕೃಷ್ಣನ್ ಅವರು ಲೋಕಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡಿದ್ದರು. 7ನೇ ವೇತನ ಆಯೋಗದ ಅನ್ವಯದಂತೆ ಕೇಂದ್ರ ಸರ್ಕಾರ ನೌಕರರಿಗೆ ಮಿನಿಮಮ್ ಮೂಲ ವೇತನದ ಏರಿಕೆ ಮಾಡುವ ಬಗ್ಗೆ ಹೇಳಿದ್ದರು. 

 ಮೂಲ ವೇತನದಲ್ಲಿ ಏರಿಕೆ ಮಾಡಿದಲ್ಲಿ ಸುಮಾರು 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ದೀಪಾವಳಿ ಕೊಡುಗೆಯಾಗಿ ಇದರ ಲಾಭ ಪಡೆದುಕೊಳ್ಳಲಿದ್ದಾರೆ.