ಕೇಂದ್ರ ಸರ್ಕಾರ ಸಾಲ ಮನ್ನಾ ಮಾಡಿದರೆ ತಾನೂ ಮಾಡುವುದಾಗಿ ಕರ್ನಾಟಕ ಸರ್ಕಾರ ನಿರಂತರವಾಗಿ ಹೇಳಿ­ಕೊಂಡು ಬರುತ್ತಿರುವ ಹಿನ್ನೆಲೆಯಲ್ಲಿ ಈ ಹೇಳಿಕೆ ಮಹತ್ವ ಪಡೆದು­ಕೊಂಡಿದೆ. ಮಹಾರಾಷ್ಟ್ರ ಸರ್ಕಾರ ಎಲ್ಲ ರೈತರ ಸಾಲ ಮನ್ನಾ ಮಾಡುವ ಕುರಿತು ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ ಸೋಮವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಜೇಟ್ಲಿ, ಕೇಂದ್ರ ಸರ್ಕಾರದ ಬೊಕ್ಕಸದಿಂದ ರೈತರ ಕೃಷಿ ಸಾಲ ಮನ್ನಾಕ್ಕೆ ಹಣ ಕೊಡುವುದಿಲ್ಲ. ಸಾಲ ಮನ್ನಾದಂತಹ ಯೋಜನೆ ಘೋಷಿಸುವ ರಾಜ್ಯ ಸರ್ಕಾರಗಳೇ ತಮ್ಮ ಸಂಪನ್ಮೂಲದಿಂದ ಹಣ ಹೊಂದಿಸಬೇಕು ಎಂದು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇನೆ. ಇದರಿಂದಾಚೆಗೆ ಕೇಂದ್ರ ಸರ್ಕಾರ ಹೇಳುವುದಕ್ಕೆ ಏನೂ ಉಳಿದಿಲ್ಲ ಎಂದು ತಿಳಿಸಿದರು.

ನವದೆಹಲಿ(ಜೂ.13): ಕೇಂದ್ರ ಸರ್ಕಾರ ಸಾಲ ಮನ್ನಾ ಮಾಡಿದರೆ ತಾನೂ ಮಾಡುವುದಾಗಿ ಕರ್ನಾಟಕ ಸರ್ಕಾರ ನಿರಂತರವಾಗಿ ಹೇಳಿ­ಕೊಂಡು ಬರುತ್ತಿರುವ ಹಿನ್ನೆಲೆಯಲ್ಲಿ ಈ ಹೇಳಿಕೆ ಮಹತ್ವ ಪಡೆದು­ಕೊಂಡಿದೆ. ಮಹಾರಾಷ್ಟ್ರ ಸರ್ಕಾರ ಎಲ್ಲ ರೈತರ ಸಾಲ ಮನ್ನಾ ಮಾಡುವ ಕುರಿತು ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ ಸೋಮವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಜೇಟ್ಲಿ, ಕೇಂದ್ರ ಸರ್ಕಾರದ ಬೊಕ್ಕಸದಿಂದ ರೈತರ ಕೃಷಿ ಸಾಲ ಮನ್ನಾಕ್ಕೆ ಹಣ ಕೊಡುವುದಿಲ್ಲ. ಸಾಲ ಮನ್ನಾದಂತಹ ಯೋಜನೆ ಘೋಷಿಸುವ ರಾಜ್ಯ ಸರ್ಕಾರಗಳೇ ತಮ್ಮ ಸಂಪನ್ಮೂಲದಿಂದ ಹಣ ಹೊಂದಿಸಬೇಕು ಎಂದು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇನೆ. ಇದರಿಂದಾಚೆಗೆ ಕೇಂದ್ರ ಸರ್ಕಾರ ಹೇಳುವುದಕ್ಕೆ ಏನೂ ಉಳಿದಿಲ್ಲ ಎಂದು ತಿಳಿಸಿದರು.

Add Asianetnews Kannada as a Preferred SourcegooglePreferred

ಉತ್ತರಪ್ರದೇಶ ಹಾಗೂ ಮಹಾರಾಷ್ಟ್ರದ ಬಿಜೆಪಿ ಸರ್ಕಾರಗಳು ಸಾಲ ಮನ್ನಾ ನಿರ್ಧಾರ ಘೋಷಣೆ ಮಾಡಿವೆ. ಮಧ್ಯಪ್ರದೇಶದಲ್ಲಿ ಸಾಲ ಮನ್ನಾಕ್ಕಾಗಿ ರೈತರು ಹಿಂಸಾರೂಪದ ಹೋರಾಟವನ್ನೇ ನಡೆಸಿದ್ದಾರೆ. ಕರ್ನಾಟಕ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳ ರೈತರು ಸಾಲ ಮನ್ನಾ ಮಾಡುವಂತೆ ಒತ್ತಾಯಿಸುತ್ತಲೇ ಬಂದಿದ್ದಾರೆ. ಆದರೆ ರೈತರ ಸಾಲ ಮನ್ನಾ ಮಾಡಿದರೆ ಹಣಕಾಸು ಪರಿಸ್ಥಿತಿ ಕೈಮೀರಿ ಹೋಗಲಿದೆ. ಹಣದುಬ್ಬರ ಹೆಚ್ಚಳಕ್ಕೂ ಕಾರಣವಾಗಲಿದೆ ಎಂದು ಕಳೆದ ವಾರ ದ್ವೈಮಾಸಿಕ ಹಣಕಾಸು ನೀತಿ ಪ್ರಕಟಣೆ ವೇಳೆ ಆರ್‌ಬಿಐ ಗವರ್ನರ್‌ ಊರ್ಜಿತ್‌ ಪಟೇಲ್‌ ಹೇಳಿದ್ದಾರೆ.