ಬಿಜೆಪಿ ಕಾರ್ಯಕರ್ತ ಸಂತೋಷ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸದಾನಂದ ಗೌಡ, ಸಿಎಂ ಸಿದ್ದರಾಮಯ್ಯ, ರಾಮಲಿಂಗಾ ರೆಡ್ಡಿ, ಜಾರ್ಜ ವಿರುದ್ಧ ಕಿಡಿ ಕಾರಿದ್ದಾರೆ. ಟ್ವೀಟರ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ರಾಮಲಿಂಗಾ ರೆಡ್ಡಿ ಪ್ರತ್ಯುತ್ತರ ನೀಡಿದ್ದು, ಇಬ್ಬರ ನಡುವೆ ವಾಕ್ಸಮರ ನಡೆದಿದೆ. ಏನ್ ಮಾತನಾಡಿದ್ದಾರೆ ಇಲ್ಲಿದೆ ನೋಡಿ
ಬೆಂಗಳೂರು (ಫೆ.01): ಬಿಜೆಪಿ ಕಾರ್ಯಕರ್ತ ಸಂತೋಷ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸದಾನಂದ ಗೌಡ, ಸಿಎಂ ಸಿದ್ದರಾಮಯ್ಯ, ರಾಮಲಿಂಗಾ ರೆಡ್ಡಿ, ಜಾರ್ಜ ವಿರುದ್ಧ ಕಿಡಿ ಕಾರಿದ್ದಾರೆ. ಟ್ವೀಟರ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ರಾಮಲಿಂಗಾ ರೆಡ್ಡಿ ಪ್ರತ್ಯುತ್ತರ ನೀಡಿದ್ದು, ಇಬ್ಬರ ನಡುವೆ ವಾಕ್ಸಮರ ನಡೆದಿದೆ. ಏನ್ ಮಾತನಾಡಿದ್ದಾರೆ ಇಲ್ಲಿದೆ ನೋಡಿ
ಕೇಂದ್ರ ಸಚಿವರಾದ ಡಿ ವಿ ಸದಾನಂದ ಗೌಡರು ಚುನಾವಣೆಗಾಗಿ ರಾಜಕೀಯ ಹೇಳಿಕೆಗಳನ್ನು ನೀಡುವುದನ್ನು ಖಯಾಲಿ ಮಾಡಿಕೊಂಡಿದ್ದಾರೆ. ಹಿಂದುಕಾರ್ಯಕರ್ತರ ಕೊಲೆ ಎಂದು ಚುನಾವಣೆಗಾಗಿ ಸರ್ಕಾರದ ವಿರುದ್ದ ಸುಳ್ಳು ಆರೋಪ ಮಾಡಿರುವುದು ಹಾಸ್ಯಾಸ್ಪದ ಎಂದು ಪ್ರತ್ಯುತ್ತರ ನೀಡಿದ್ದಾರೆ.
Ad3
ಬಿಜಾಪುರದ ದಾನಮ್ಮಳನ್ನು ಕೊಲೆ ಮಾಡಿದ್ದು ನಿಮ್ಮ ಪಕ್ಷದ ಕಾರ್ಯಕರ್ತನಲ್ಲವೇ? ಮೂಡಿಗೆರೆಯ ಧನ್ಯಶ್ರೀ ಸಾವಿಗೆ ಕಾರಣವಾಗಿದ್ದು ನಿಮ್ಮ ಪಕ್ಷದ ಮುಖಂಡನಲ್ಲವೇ? ಉಡುಪಿಯ ಪ್ರವೀಣ ಪೂಜಾರಿಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದು ನಿಮ್ಮ ಪಕ್ಷದ ನಿಷ್ಟಾವಂತ ಕಾರ್ಯಕರ್ತರಲ್ಲವೇ? ಬಂಟ್ವಾಳದ ಹರೀಶ ಪೂಜಾರಿ ಕೊಲೆ ಪ್ರಕರಣದಲ್ಲಿ ನಿಮ್ಮ ಸಂಘಪರಿವಾರದ ನಾಯಕ ಬಂಧನಕ್ಕೆ ಒಳಗಾಗಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಮಂಗಳೂರಿಗೆ ಬೆಂಕಿ ಹಚ್ಚುವುದಾಗಿ ಹೇಳಿಕೆ ನೀಡಿ ಕಾರ್ತಿಕ್ ರಾಜ್ ಕೊಲೆ ಪ್ರಕರಣದ ತನಿಖೆಯನ್ನು ದಾರಿ ತಪ್ಪಿಸಲು ಪ್ರಯತ್ನಿಸಿದ್ದು ನಿಮ್ಮ ಪಕ್ಷದ ಸಂಸದರಲ್ಲವೇ? ವಿನಾಯಕ ಬಾಳಿಗಾ ಸೇರಿದಂತೆ ಕೊಲೆಯಾದ ಇವರೆಲ್ಲರು ಹಿಂದುಗಳಲ್ಲವೇ? ಇವರೆಲ್ಲರ ತಂದೆ ತಾಯಿಯ ಶಾಪ ನಿಮ್ಮ ಪಕ್ಷಕ್ಕೆ ತಟ್ಟುವುದಿಲ್ಲವೇ? ಬಿಜೆಪಿ ಕಾರ್ಯಕರ್ತರಿಂದ ಕೊಲೆಯಾದ ದಲಿತ,ಹಿಂದುಗಳ ಮನೆಗೆ ಬೇಟಿ ನೀಡಿ ಸಾಂತ್ವಾನ ಹೇಳುವ ದೊಡ್ಡಮನಸ್ಸು ನಿಮಗಿಲ್ಲವೇ?
ಕೊಲೆಯನ್ನು ಅಪರಾಧವಾಗಿಯೇ ನೋಡಿ, ಕೊಲೆಯನ್ನು ಅಪರಾಧವಾಗಿಯೇ ನೋಡಿದ ಕಾರಣಕ್ಕಾಗಿ ಬಹುತೇಕ ಎಲ್ಲಾ ಕೊಲೆ ಪ್ರಕರಣದ ಅಪರಾಧಿಗಳನ್ನು ಸರ್ಕಾರ ಇಂದು ಜೈಲಿಗಟ್ಟಿದೆ. ರಾಜ್ಯಕ್ಕೆ ಬಿಜೆಪಿಯ ಬೆಂಕಿ ಹಚ್ಚುವಂತಾ ನಾಯಕರುಗಳು ಬೇಕೋ ಅಥವಾ ಬೆಂಕಿ ಆರಿಸುವ ನಾಯಕರುಗಳು ಬೇಕೋ ಎಂಬುದನ್ನು ಜನ ನಿರ್ಧರಿಸಿದ್ದಾರೆ. ಕರ್ನಾಟಕದಲ್ಲಿ ಅಧಿಕಾರಕ್ಕೇರುವ ಹಗಲುಗನಸು ಕಾಣಬೇಡಿ ಎಂದು ಪ್ರಶ್ನಿಸಿದ್ದಾರೆ.
