ಬೆಂಗಳೂರು: ಲೋಕಸಭೆಯಲ್ಲಿ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬೆಳಗಾವಿ ಸಂಸದ ಸುರೇಶ್‌ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎಂ. ನಾರಾಯಣ ಗೌಡ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುರೇಶ್‌ ಅಂಗಡಿ ಅವರು ರಾಜ್ಯದ ಜನತೆಯ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದ್ದಾರೆ. ಇದೇ ವೇಳೆ, ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ರಾಜ್ಯದ ಸಂಸದರನ್ನು ಅಭಿನಂದಿಸಿದ್ದಾರೆ.

ಕನ್ನಡಪ್ರಭದೊಂದಿಗೆ ಮಾತನಾಡಿದ ನಾರಾಯಣಗೌಡ ಅವರು, ಸುರೇಶ್‌ ಅಂಗಡಿ ಹೊರತುಪಡಿಸಿ ಉಳಿದ ಎಲ್ಲ ಸಂಸದರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ಸಂತಸ ತಂದಿದೆ. ಆದರೆ, ಸುರೇಶ್‌ ಅಂಗಡಿ ಧೋರಣೆ ಬೇಸರ ತರಿಸಿದ್ದು, ಈ ದ್ರೋಹಕ್ಕಾಗಿ ಅವರು ರಾಜ್ಯದ ಜನತೆಯ ಕ್ಷಮೆ ಕೋರುವವರೆಗೂ ಹೋರಾಟ ನಡೆಸುವುದಾಗಿ ಹೇಳಿದರು.

ಚಳಿಗಾಲದ ಸಂಸತ್ ಅಧಿವೇಶನ ಆರಂಭಕ್ಕೂ ಮುನ್ನ ಮೋದಿ ಹೇಳಿದ್ದೇನು?

ಮಾಜಿ ಮುಖ್ಯಮಂತ್ರಿ ಜೆ.ಎಚ್‌. ಪಾಟೀಲ್‌ ಅವರಿಂದ ಆರಂಭವಾದ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ ಪರಂಪರೆ ಮುಂದೆ ಮಾಜಿ ಕೇಂದ್ರ ಸಚಿವ ಅನಂತ್‌ ಕುಮಾರ್‌ ಅವರ ನೇತೃತ್ವದಲ್ಲಿ ಪ್ರತಿಬಾರಿ ಲೋಕಸಭಾ ಸದಸ್ಯರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ಕಾರಣವಾಗಿತ್ತು. ಈ ಬಾರಿ ಅವರ ಅನುಪಸ್ಥಿತಿಯಲ್ಲಿ ಸೋಮವಾರ ನವದೆಹಲಿಯ ಸಂಸತ್‌ ಭವನದಲ್ಲಿ ನಡೆದ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬೆಳಗಾವಿಯ ಸಂಸದ ಸುರೇಶ್‌ ಅಂಗಡಿ ಹೊರತುಪಡಿಸಿ ಉಳಿದ ಎಲ್ಲ ಸಂಸದರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ಹೆಮ್ಮೆಯ ಸಂಗತಿ. ಎಲ್ಲ ಸಂಸದರಿಗೆ ರಾಜ್ಯದ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲೂ ಕನ್ನಡಿಗರ ಸ್ವಾಭಿಮಾನ ಹಾಗೂ ಸಾರ್ವಭೌಮತೆಯನ್ನು ಸಂಸತ್‌ನಲ್ಲಿ ಎತ್ತಿಹಿಡಿಯುವ ಕಾರ್ಯ ಮುಂದುವರೆಸಬೇಕೆಂದು ಮನವಿ ಮಾಡಿದ್ದಾರೆ.

ಸುರೇಶ್‌ ಅಂಗಡಿ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ:

ರಾಜ್ಯದ ಎಲ್ಲ 27 ಸಂಸದರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ ಈ ಸಂದರ್ಭದಲ್ಲಿ ಸುರೇಶ್‌ ಅಂಗಡಿ ಮಾತ್ರ ಹಿಂದಿ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿರುವುದು ತೀವ್ರ ಬೇಸರ ತಂದಿದೆ ಎಂದ ನಾರಾಯಣಗೌಡ ಅವರು, ಸುರೇಶ್‌ ಅಂಗಡಿ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ, ಕಪ್ಪು ಬಟ್ಟೆಪ್ರದರ್ಶನ ಆರಂಭಿಸುತ್ತೇವೆ. ಅಂಗಡಿ ರಾಜ್ಯದ ಜನತೆಯ ಕ್ಷಮೆ ಕೇಳುವವರೆಗೂ ಈ ಹೋರಾಟ ನಡೆಸುತ್ತೇವೆ ಟಿ.ಎ.ನಾರಾಯಣಗೌಡ ಹೇಳಿದರು.

ಸಾಂಸ್ಕೃತಿಕ ಉಡುಗೆಯಲ್ಲಿ ಮಂಚಿದ ಯುವ ಸಂಸದರು

ತಪ್ಪನ್ನು ಅಂಗಡಿ ಸಮರ್ಥಿಸಿಕೊಂಡಿದ್ದು ಹೇಗೆ?ನಾನು ಲೋಕಸಭೆಯ ಸದಸ್ಯನಾಗಿ ಉದ್ದೇಶಪೂರ್ವಕವಾಗಿ ಕನ್ನಡದ ಬದಲು ಆಂಗ್ಲ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿಲ್ಲ ಎಂದು ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ ಸಮಜಾಯಿಷಿ ನೀಡಿದ್ದಾರೆ.

ಸದನದ ಘನತೆ ಮೆರೆಯೋಣ

ಸೋಮವಾರ ‘ಕನ್ನಡಪ್ರಭ’ದೊಂದಿಗೆ ಮಾತನಾಡಿದ ಅವರು, ಪ್ರಮಾಣವಚನ ಸ್ವೀಕರಿಸುವ ಕೊನೆ ಗಳಿಗೆಯಲ್ಲಿ ನನ್ನ ಕೈಗೆ ಆಂಗ್ಲ ಭಾಷೆಯ ಪ್ರತಿ ಬಂದಿತ್ತು. ಹೀಗಾಗಿ, ಅದನ್ನೇ ಓದಿ ಪ್ರಮಾಣ ಸ್ವೀಕರಿಸಬೇಕಾಯಿತು. ಬಹುಶಃ ನನ್ನ ಸಹಾಯಕರು ಆ ಬಗ್ಗೆ ಎಚ್ಚರ ವಹಿಸಿರಲಿಕ್ಕಿಲ್ಲ. ಆದರೆ, ಉದ್ದೇಶಪೂರ್ವಕವಾಗಿ ಮಾಡಿದ್ದಲ್ಲ. ನಾನು ಯಾವಾಗಲೂ ಕನ್ನಡ ಭಾಷೆಗೆ ಮೊದಲ ಪ್ರಾಶಸ್ತ್ಯ ಕೊಡುತ್ತಲೇ ಬಂದಿದ್ದೇನೆ. ಕನ್ನಡದ ಬಗ್ಗೆ ನನಗಿರುವ ಪ್ರೀತಿಯನ್ನು ಯಾರೂ ಅನುಮಾನಿಸುವ ಅಗತ್ಯವಿಲ್ಲ ಎಂದು ತಿಳಿಸಿದರು.

"