ತ್ರಿವಳಿ ತಲಾಖ್: ಮುಸ್ಲಿಂ ಪುರುಷರ ಒತ್ತಡಕ್ಕೆ ಮಣಿದ ಮೋದಿ ಸರ್ಕಾರ!

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 9, Aug 2018, 5:57 PM IST
Centre Clears Watered Down Triple Talaq Bill For Rajya Sabha
Highlights

ತ್ರಿವಳಿ ತಲಾಖ್ ಮಸೂದೆ ತಿದ್ದುಪಡಿ! ತಿದ್ದುಪಡಿಗೆ ಕೇಂದ್ರ ಸಂಪುಟದ ಅಂಗೀಕಾರ! ಮ್ಯಾಜಿಸ್ಟ್ರೇಟ್ ರಿಂದ ಜಾಮೀನು ಪಡೆಯಲು ಅನುಮತಿ! ರಾಜ್ಯಸಭೆ ಒಪ್ಪಿಗೆಗೆ ಕಾದಿದೆ ಮಸೂದೆ

ನವದೆಹಲಿ(ಆ.9): ತ್ರಿವಳಿ ತಲಾಖ್ ಮಸೂದೆ ತಿದ್ದುಪಡಿಗೆ ಕೇಂದ್ರ ಸಚಿವ ಸಂಪುಟ ಇಂದು ಒಪ್ಪಿಗೆ ನೀಡಿದ್ದು, ಪ್ರಕರಣ ದಾಖಲಾದ ವ್ಯಕ್ತಿ ಮ್ಯಾಜಿಸ್ಟ್ರೇಟ್ ರಿಂದ ಜಾಮೀನು ಪಡೆಯಲು ಅವಕಾಶ ನೀಡಲಾಗಿದೆ.

ಇನ್ನು ತ್ರಿವಳಿ ತಲಾಖ್ ಅಪರಾಧ ಜಾಮೀನು ರಹಿತವಾಗಿದ್ದರೂ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ನೀಡಬಹುದಾಗಿದೆ. ಸುಪ್ರೀಂ ಕೋರ್ಟ್ ತ್ರಿವಳಿ ತಲಾಖ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿದ್ದು, ಅದನ್ನು ಕಾನೂನಾತ್ಮಕವಾಗಿ ಸಂಪೂರ್ಣ ತೆಗೆದು ಹಾಕಲು ಮುಂದಾಗಿರುವ ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ತಿದ್ದುಪಡಿ ಮಸೂದೆಯನ್ನು ಕಳೆದ ಡಿಸೆಂಬರ್ ನಲ್ಲಿ ಲೋಕಸಭೆಯಲ್ಲಿ ಅಂಗೀಕರಿಸಿದೆ.

ಮೂರು ಸಲ ತಲಾಖ್ ಎಂದು ಹೇಳಿ ವಿಚ್ಛೇದನ ನೀಡುವ ಮುಸ್ಲಿಂ ವ್ಯಕ್ತಿಗೆ ಮೂರು ವರ್ಷದ ಜೈಲು ಶಿಕ್ಷೆ ವಿಧಿಸುವ ಪ್ರಸ್ತಾವ ಈ ಮಸೂದೆಯಲ್ಲಿದೆ. ಲೋಕಸಭೆಯಲ್ಲಿ ಅಂಗೀಕಾರ ಆಗಿರುವ ಈ ಮಸೂದೆಗೆ ರಾಜ್ಯಸಭೆ ಒಪ್ಪಿಗೆ ನೀಡಬೇಕಿದೆ.

loader