ಕರ್ನಾಟಕ ಸೇರಿದಂತೆ, ಪಕ್ಕದ ಪಾಂಡಿಚೇರಿ, ಕೇರಳ, ಉತ್ತರಾಖಂಡ ಹಾಗೂ ಬಿಹಾರ ರಾಜ್ಯಗಳೂ ಒಂದು ದಿನದ ಶೋಕಾಚರಣೆಯನ್ನು ಆಚರಿಸುತ್ತಿವೆ.

ನವದೆಹಲಿ (ಡಿ.06): ತಮಿಳುನಾಡು ಮುಖ್ಯಮಂತ್ರಿ ಜಯಾಲಿತಾ ನಿಧನದ ಹಿನ್ನೆಲೆಯಲ್ಲಿ ಕೆಂದ್ರ ಸರ್ಕಾರ ಒಂದು ದಿನದ ಶೋಕಾಚರಣೆ ಘೋಷಿಸಿದೆ.

ತಮಿಳುನಾಡು ಸರ್ಕಾರ ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಿಗೆ 3 ದಿನ ರಜೆ ಘೋಷಿಸಿದೆ ಹಾಗೂ ರಾಜ್ಯದಲ್ಲಿ 7 ದಿನ ಶೋಕಾಚರಣೆ ನಡೆಯಲಿದೆ.

ಕರ್ನಾಟಕ ಸೇರಿದಂತೆ, ಪಕ್ಕದ ಪಾಂಡಿಚೇರಿ, ಕೇರಳ, ಉತ್ತರಾಖಂಡ ಹಾಗೂ ಬಿಹಾರ ರಾಜ್ಯಗಳೂ ಒಂದು ದಿನದ ಶೋಕಾಚರಣೆಯನ್ನು ಆಚರಿಸುತ್ತಿವೆ.

ಎಲ್ಲ ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರೀಯ ಬಾವುಟವನ್ನು ಅರ್ಧ ಮಟ್ಟಕ್ಕೆ ಹಾರಿಸಲು ಸೂಚನೆ ನೀಡಲಾಗಿದೆ.

ಚೆನ್ನೈನ ಪೋಯಸ್​​ ಗಾರ್ಡನ್‌‌ನಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರಾಜ್ಯದಾದ್ಯಂತ ಯಾವುದೇ ಭಾಗದಲ್ಲಿ 3 ದಿನ ಮನರಂಜನಾ ಕಾರ್ಯಕ್ರಮಗಳು ನಡೆಯುವುದಿಲ್ಲ.