ನವದೆಹಲಿ (ಫೆ. 20): ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಕೇಂದ್ರ ಸರ್ಕಾರವು, ಕೇಂದ್ರ ನೌಕರರ ತುಟ್ಟಿಭತ್ಯೆಯನ್ನು 2019ರ ಜ.1ರಿಂದ ಪೂರ್ವ ಅನ್ವಯವಾಗುವಂತೆ ಶೇ.3ರಷ್ಟುಏರಿಕೆ ಮಾಡಿದೆ.

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಮೋದಿ, 1 ಕೋಟಿಗೂ ಅಧಿಕ ನೌಕರರಿಗೆ ಲಾಭ

ಇದರಿಂದಾಗಿ 48.41 ಲಕ್ಷ ನೌಕರರು ಹಾಗೂ 62.03 ಲಕ್ಷ ಪಿಂಚಣಿದಾರರು ಸೇರಿದಂತೆ 1.1 ಕೋಟಿ ಮಂದಿಗೆ ಪ್ರಯೋಜನವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಮಂಗಳವಾರ ಈ ನಿರ್ಧಾರ ಕೈಗೊಳ್ಳಲಾಗಿದೆ.

ಬಿಬಿಎಂಪಿ ಬಜೆಟ್ 2019: ಮಹಿಳೆಯರಿಗೆ ಬಂಪರ್ ಕೊಡುಗೆ!

ಈಗಿರುವ ಶೇ.9ರಷ್ಟುತುಟ್ಟಿಭತ್ಯೆಯ ಜೊತೆಗೆ ಹೆಚ್ಚುವರಿಯಾಗಿ ಶೇ.3ರಷ್ಟುಭತ್ಯೆ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಹಣಕಾಸು ಸಚಿವ ಅರುಣ್‌ ಜೇಟ್ಲಿ ತಿಳಿಸಿದ್ದಾರೆ.