ಚೆನ್ನೈ [ಅ.09]: ಆಂಧ್ರಪ್ರದೇಶ-ತೆಲಂಗಾಣದಲ್ಲಿ ಹರಿಯುವ ಗೋದಾವರಿ ಹಾಗೂ ಕರ್ನಾಟಕ-ತಮಿಳುನಾಡಿನಲ್ಲಿ ಹರಿಯುವ ಕಾವೇರಿ ನದಿಗಳನ್ನು ಜೋಡಿಸಲು ಕೇಂದ್ರ ಸರ್ಕಾರ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ತಿಳಿಸಿದ್ದಾರೆ.

ಮಂಗಳವಾರ ತೆಲಂಗಾಣ ರಾಜ್ಯಪಾಲೆ ತಮಿಳಿಸಾಯಿ ಸೌಂದರರಾಜನ್‌ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ತೆಲಂಗಾಣ ಹಾಗೂ ಆಂಧ್ರಪ್ರದೇಶ ಸರ್ಕಾರಗಳೊಂದಿಗೆ ಮಾತುಕತೆ ನಡೆಸಿ ಡಿಪಿಆರ್‌ ಸಿದ್ಧಪಡಿಸಲಾಗುತ್ತಿದೆ ಎಂದು ಅವರು ಹೇಳಿದರು.