Asianet Suvarna News Asianet Suvarna News

ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣ : ಮರಣ ದಂಡನೆ ಬೇಡವೆಂದ ಕೇಂದ್ರ

ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣ ಸಾಬೀತಾದ ದೋಷಿಗಳಿಗೆ ಮರಣ ದಂಡನೆ ವಿಧಿಸುವ ಕಾನೂನು ರೂಪಿಸುವುದರ ಪರವಾಗಿ ಕೇಂದ್ರ ಸರ್ಕಾರ ಇಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಗುರುವಾರ ತಿಳಿಸಲಾಗಿದೆ.

Centre Opposes Plea For Death Penalty In Rape Cases Of Kids

ನವದೆಹಲಿ: ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣ ಸಾಬೀತಾದ ದೋಷಿಗಳಿಗೆ ಮರಣ ದಂಡನೆ ವಿಧಿಸುವ ಕಾನೂನು ರೂಪಿಸುವುದರ ಪರವಾಗಿ ಕೇಂದ್ರ ಸರ್ಕಾರ ಇಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಗುರುವಾರ ತಿಳಿಸಲಾಗಿದೆ.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಮರಣ ದಂಡನೆ ವಿಧಿಸುವ ಮಸೂದೆ ಬಿಜೆಪಿ ಆಡಳಿತದ ಮಧ್ಯಪ್ರದೇಶದ ವಿಧಾನಸಭೆ ಅಂಗೀಕಾರವಾದ ನಡುವೆಯೇ, ಸುಪ್ರೀಂ ಕೋರ್ಟ್‌ಗೆ ವಿವರಣೆ ನೀಡಿರುವ ಹೆಚ್ಚುವರಿ ಸಾಲಿಸಿಟರ್ ಜನರಲ್ ಪಿ.ಎಸ್. ನರಸಿಂಹ, ‘ಮರಣ ದಂಡನೆ ಎಲ್ಲ ವಿಷಯಗಳಿಗೂ ಪರಿಹಾರವಲ್ಲ’ ಎಂದು ತಿಳಿಸಿದ್ದಾರೆ.

ಮಕ್ಕಳ ಮೇಲಿನ ಅತ್ಯಾಚಾರಕ್ಕೆ ಮರಣ ದಂಡನೆ ವಿಧಿಸುವ ಕಾನೂನು ರೂಪಿಸಲು ಸರ್ಕಾರಕ್ಕೆ ನಿರ್ದೇಶಿಸಲು ನ್ಯಾಯವಾದಿ ಅಲಕ್ ಅಲೋಕ್ ಶ್ರೀವಾಸ್ತವ ಎಂಬವರು ಸಲ್ಲಿಸಿದ್ದ ಅರ್ಜಿ ಗೆ ಸಂಬಂಧಿಸಿ ಎಎಸ್‌ಜಿ ನರಸಿಂಹ ಈ ಪ್ರತಿಕ್ರಿಯೆ ಕೋರ್ಟ್‌ಗೆ ನೀಡಿದ್ದಾರೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಲ್ಲಿ, ಮಕ್ಕಳ ಮೇಲಿನ ಅತ್ಯಾಚಾರಕ್ಕೆ ಕಠಿಣ ಶಿಕ್ಷೆಯ ಪ್ರಮಾಣ ವರ್ಗೀಕರಿಸಲಾಗಿದೆ. ಮಕ್ಕಳ ಮೇಲಿನ ಅತ್ಯಾಚಾರಕ್ಕೆ ಕನಿಷ್ಠ 10 ವರ್ಷ ಜೈಲು ಶಿಕ್ಷೆಯಿದೆ. ಅಲ್ಲದೆ, ಅಪ್ರಾಪ್ತ ವಯಸ್ಕರ ಸಾಮೂಹಿಕ ಅತ್ಯಾ ಚಾರಕ್ಕೆ 20 ವರ್ಷ ಮತ್ತು ಜೀವಾವಧಿ ಶಿಕ್ಷೆ ವಿಧಿಸಬಹುದಾಗಿದೆ ಎಂದು ನರಸಿಂಹ ಕೋರ್ಟ್‌ಗೆ ತಿಳಿಸಿದ್ದಾರೆ.

ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ನಿಯಂತ್ರಿಸಲು, ಮಕ್ಕಳ ಮೇಲಿನ ಅತ್ಯಾಚಾರಕ್ಕೆ ಮರಣ ದಂಡನೆ ವಿಧಿಸಬೇಕೆಂಬ ಆಗ್ರಹ ಕೇಳಿಬರುತ್ತಿದೆ.

Follow Us:
Download App:
  • android
  • ios