ವೈವಾಹಿಕ ಅತ್ಯಾಚಾರವನ್ನು ಕ್ರಿಮಿನಲ್ ಅಪರಾಧವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್’ನಲ್ಲಿ ಅಫಿಡವಿಟ್ ಸಲ್ಲಿಸಿದೆ.

ನವದೆಹಲಿ (ಆ.29): ವೈವಾಹಿಕ ಅತ್ಯಾಚಾರವನ್ನು ಕ್ರಿಮಿನಲ್ ಅಪರಾಧವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್’ನಲ್ಲಿ ಅಫಿಡವಿಟ್ ಸಲ್ಲಿಸಿದೆ.

ಅತ್ಯಾಚಾರ ವಿಚಾರವಾಗಿ ಭಾರತ ಪಾಶ್ಚಾತ್ಯ ದೇಶಗಳನ್ನು ಅಂಧವಾಗಿ ಅನುಸರಿಸಲು ಸಾಧ್ಯವಿಲ್ಲ. ವೈವಾಹಿಕ ಅತ್ಯಾಚಾರವನ್ನು ಕ್ರಿಮಿನಲ್ ಅಪರಾಧವೆಂದು ಪರಿಗಣಿಸುವ ಮುನ್ನ ದಾಂಪತ್ಯದಲ್ಲಿ ಯಾವುದು ಅತ್ಯಾಚಾರ, ಯಾವುದು ಅಲ್ಲ ಎಂಬುದನ್ನು ಮೊದಲು ನಿರ್ಧರಿಸಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ.

ಪತಿ ತನ್ನ ಪತ್ನಿಯೊಂದಿಗೆ ನಡೆಸುವ ಲೈಂಗಿಕ ಕ್ರಿಯೆಯನ್ನು ಅತ್ಯಾಚಾರವೆಂದು ಪರಿಗಣಿಸಲು ಸಾಧ್ಯವಿಲ್ಲ. ಇಲ್ಲಿ ಪ್ರಮುಖ ಸಮಸ್ಯೆಯೆಂದರೆ ಸಾಕ್ಷಾಧಾರಗಳದ್ದು. ಗಂಡ ಹೆಂಡತಿ ನಡುವೆ ನಡೆಯುವ ಲೈಂಗಿಕ ಕ್ರಿಯೆಗಳಲ್ಲಿ ಪುರಾವೆಗಳನ್ನು ಒದಗಿಸಲು ಸಾಧ್ಯವಿಲ್ಲ. ಹಾಗಿದ್ದಾಗ ನ್ಯಾಯಾಲಯ ಹೇಗೆ ತೀರ್ಪು ನೀಡಲು ಸಾಧ್ಯ ಎಂದು ಕೇಂದ್ರ ಸರ್ಕಾರ ಪ್ರಶ್ನಿಸಿದೆ.