ಕಂಬಳ ಕ್ರೀಡೆಯ ವಿಚಾರವಾಗಿ ಮೋದಿ ಸರ್ಕಾರದ ತೀರ್ಮಾನ ಪ್ರಮುಖ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು (ಜ.23): ಕಂಬಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರ ಕಂಬಳ ಕ್ರೀಡೆ ಪರವಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು, ಎಂದು ಆಗ್ರಹಿಸಿದ್ದಾರೆ.

ಕಂಬಳ ಕ್ರೀಡೆಯ ವಿಚಾರವಾಗಿ ಮೋದಿ ಸರ್ಕಾರದ ತೀರ್ಮಾನ ಪ್ರಮುಖ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಈ ಮಧ್ಯೆ ಕರಾವಳಿಯ ಕ್ರೀಡೆ ಕಂಬಳಕ್ಕೆ ಅವಕಾಶ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಜೊತೆ ಚರ್ಚಿಸಲಾಗುವುದು ಎಂದು ಕೇಂದ್ರ ಸಚಿವ ಸದಾನಂದಗೌಡ ಸ್ಪಷ್ಟನೆ ಕೊಟ್ಟಿದ್ದಾರೆ.

ಬೆಂಗಳೂರಲ್ಲಿ ಮಾತನಾಡಿದ ಡಿವಿಎಸ್​, ತಮಿಳುನಾಡಿನಲ್ಲಿ ಜಲ್ಲಿಕಟ್ಟುಗೆ ಅವಕಾಶ ಪಡೆದಿದ್ದಾರೆ. ನಾವು ಕೂಡಾ ಕಂಬಳಕ್ಕೆ ಅವಕಾಶ ನೀಡುವಂತೆ ಕೋರುತ್ತೇವೆ ಎಂದು ಸುವರ್ಣನ್ಯೂಸ್​ಗೆ ಹೇಳಿದ್ದಾರೆ.