ಪಾಕಿಸ್ತಾನದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಭಾರತದ ಮಾಜಿ ಸೇನಾಧಿಕಾರಿ ಕುಲಭೂಷಣ್  ಜಾಧವ್ ಬಿಡುಗಡೆ ಮಾಡುವಂತೆ ಅಂತರಾಷ್ಟ್ರೀಯ ನ್ಯಾಯಾಲಯವನ್ನು ಸಂಪರ್ಕಿಸಲು ಕೇಂದ್ರ ಸರ್ಕಾರಕ್ಕೆ ಸೂಚಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿದೆ. ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಕೋರ್ಟ್ ಹೇಳಿದೆ.

ನವದೆಹಲಿ (ಏ.19): ಪಾಕಿಸ್ತಾನದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ಭಾರತದ ಮಾಜಿ ಸೇನಾಧಿಕಾರಿ ಕುಲಭೂಷಣ್ ಜಾಧವ್ ಬಿಡುಗಡೆ ಮಾಡುವಂತೆ ಅಂತರಾಷ್ಟ್ರೀಯ ನ್ಯಾಯಾಲಯವನ್ನು ಸಂಪರ್ಕಿಸಲು ಕೇಂದ್ರ ಸರ್ಕಾರಕ್ಕೆ ಸೂಚಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿದೆ. ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಕೋರ್ಟ್ ಹೇಳಿದೆ.

ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಈ ವಿಚಾರದಲ್ಲಿ ಕೋರ್ಟ್ ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ ಎಂದು ನ್ಯಾ. ಗೀತಾ ಮಿತ್ತಲ್ ಹಾಗೂ ನ್ಯಾ. ಅನು ಮಲೋತ್ರಾ ನ್ಯಾಯಪೀಠವು ಹೇಳಿದೆ.

ಇದೊಂದು ಸೂಕ್ಷ್ಮ ವಿಚಾರವಾಗಿದ್ದು, ಮುಕ್ತವಾಗಿ ಚರ್ಚೆ ಮಾಡುವುದು ಅಸಮಂಜಸ. ಜಾಧವ್ ಬಿಡುಗಡೆಗೆ ಸರ್ಕಾರ ತೆಗೆದುಕೊಳ್ಳುವ ಕ್ರಮವನ್ನು ಬಹಿರಂಗಗೊಳಿಸುವುದರಿಂದ ಅಪಾಯವಾಗಬಹುದು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.