ತೈಲ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಿದೆ. ಈ ಬಗ್ಗೆ ಶೀಘ್ರವೇ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ. 

ಹೈದರಾಬಾದ್: ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿನಿತ್ಯ ಏರಿಕೆಯಾಗುತ್ತಿರುವ ವಿಚಾರವಾಗಿ ಬಿಜೆಪಿ ರಾಷ್ಟ್ರೀ ಯ ಅಧ್ಯಕ್ಷ ಅಮಿತ್ ಶಾ ಇದೇ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. 

ಅಂತಾರಾಷ್ಟ್ರೀಯ ಮಾರು ಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ ಹಾಗೂ ರುಪಾ ಯಿ ಮೌಲ್ಯ ಕುಸಿತದಿಂದಾಗಿ ದರ ಹೆಚ್ಚಾಗುತ್ತಿದೆ. ಇದಕ್ಕೆ ಶೀಘ್ರದಲ್ಲೇ ಕೇಂದ್ರ ಸರ್ಕಾರ ಪರಿಹಾರ ಹುಡುಕಲಿದೆ ಎಂದು ಅವರು ತಿಳಿಸಿದ್ದಾರೆ. ತೈಲ ಬೆಲೆ ಹೆಚ್ಚಳ, ರುಪಾಯಿ ದರ ಕುಸಿತ ವಿಚಾ ರಗಳು ಬಿಜೆಪಿ ಹಾಗೂ ಕೇಂದ್ರ ಸರ್ಕಾರ ಎರಡರ ಚಿಂತೆಗೂ ಕಾರಣವಾಗಿದೆ. ಜಾಗತಿಕವಾಗಿ ನಡೆಯು ತ್ತಿರುವ ಬೆಳವಣಿಗೆಗಳು ಇದಕ್ಕೆ ಕಾರಣ. 

ಅಮೆರಿಕ ಹಾಗೂ ಚೀನಾ ನಡುವಣ ವ್ಯಾಪಾರ ಸಮರ, ಅಮೆರಿಕ ಹಾಗೂ ತೈಲು ಉತ್ಪಾದಕ ರಾಷ್ಟ್ರಗಳ ನಡುವೆ ಇರುವ ವಿವಾದಗಳಿಂದಾಗಿ ಇಂತಹ ಬೆಳವಣಿ ಗೆಗಳು ನಡೆಯುತ್ತಿವೆ. ಶೀಘ್ರದಲ್ಲೇ ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಒಂದು ಪರಿಹಾರ ದೊಂದಿಗೆ ಬರಲಿದೆ. ಇತರೆ ದೇಶಗಳ ಕರೆನ್ಸಿಗಳಿಗೆ ಹೋಲಿಸಿದರೆ ರುಪಾಯಿ ಮೇಲಿನ ಪರಿಣಾಮ ತೀರಾ ಕಡಿಮೆ ಇದೆ ಎಂದು ಹೇಳಿದರು