Asianet Suvarna News Asianet Suvarna News

ಮೋದಿ ಸರ್ಕಾರದಿಂದ ಮಹತ್ವದ ನಿರ್ಧಾರ: ಕೇಂದ್ರದಿಂದ ಹಜ್​ ಯಾತ್ರೆಗೆ ನೀಡುತ್ತಿದ್ದ ಸಬ್ಸಿಡಿ ರದ್ದು​

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಇಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಕೇಂದ್ರ ಸರ್ಕಾರದಿಂದ ಮುಸ್ಲಿಮರ ಹಜ್​ ಯಾತ್ರೆಗೆ ನೀಡಲಾಗುತ್ತಿದ್ದ ಸಬ್ಸಿಡಿ ರದ್ದುಗೊಳಿಸಿದೆ.

Centre Withdraws Haj Subsidy

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಇಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಕೇಂದ್ರ ಸರ್ಕಾರದಿಂದ ಮುಸ್ಲಿಮರ ಹಜ್​ ಯಾತ್ರೆಗೆ ನೀಡಲಾಗುತ್ತಿದ್ದ ಸಬ್ಸಿಡಿ ರದ್ದುಗೊಳಿಸಿದೆ.

​ಈ ನಿರ್ಧಾರವನ್ನು ಇಂದು ಪ್ರಕಟಿಸಿರುವ ಅಲ್ಪಸಂಖ್ಯಾತ ಖಾತೆ ಸಚಿವ ಮುಕ್ತಾರ್​ ಅಬ್ಬಾಸ್​ ನಖ್ವಿ,  ಅಲ್ಪಸಂಖ್ಯಾತರ ಶ್ರೇಯೋಭಿವೃದ್ದಿಯ ಒಂದು ಭಾಗವಾಗಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು  ಹೇಳಿದ್ದಾರೆ.

ಹಜ್​ ಸಬ್ಸಿಡಿ ರದ್ದು ನಿರ್ಧಾರವನ್ನು ಕೇಂದ್ರ ಸಮರ್ಥಿಸಿಕೊಂಡಿದ್ದು, ಅಲ್ಪಸಂಖ್ಯಾತರ ಓಲೈಕೆ ರಾಜಕಾರಣದ ಅಂತ್ಯವಾಗಿದೆ ಎಂದು ಹೇಳಿದೆ.

ಹಜ್​ ಸಬ್ಸಿಡಿ ಹಣ ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ಬಳಸಲು ನಿರ್ಧರಿಸಲಾಗಿದ್ದು, ನರೇಂದ್ರ ಮೋದಿ ಸರ್ಕಾರದ  ಈ ನಿರ್ಧಾರ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಈ ವರ್ಷದ ಹಜ್​ ಯಾತ್ರೆಯಿಂದಲೇ ರದ್ದತಿ ನಿರ್ಣಯ ಅನ್ವಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

Follow Us:
Download App:
  • android
  • ios