ಮೇ 2ರಂದು ಬೆಳಗ್ಗೆ 10.30ರಿಂದ 11.50 ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರ ವರೆಗೆ ಗಣಿತ ಪರೀಕ್ಷೆ, ಮೇ 3ರಂದು ಬೆಳಗ್ಗೆ 10.30ರಿಂದ 11.50ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ.
ಬೆಂಗಳೂರು(ಏ.01): ನಾಳೆಯಿಂದ 2017-18ನೇ ಸಾಲಿನ ಸಿಇಟಿ ಪರೀಕ್ಷೆ ನಡೆಯಲಿದೆ. ಇದೇ ಮೊದಲ ಬಾರಿಗೆ ಪರೀಕ್ಷಾರ್ಥಿಗಳು ಕನ್ನಡದಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಮೇ 2ರಂದು ಬೆಳಗ್ಗೆ 10.30ರಿಂದ 11.50 ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರ ವರೆಗೆ ಗಣಿತ ಪರೀಕ್ಷೆ, ಮೇ 3ರಂದು ಬೆಳಗ್ಗೆ 10.30ರಿಂದ 11.50ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ರಾಜ್ಯಾದ್ಯಂತ 404 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯಲಿದ್ದು, ಒಟ್ಟು 1.85 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ.
