ಬೆಂಗಳೂರು[ಆ. 07]  ಈಗಾಗಲೇ ಮಹಾಮಳೆಗೆ ರಾಜ್ಯದ ಅನೇಕ ಭಾಗಗಳು ಜಲಾವೃತವಾಗಿವೆ. ಮಹಮಳೆ ಇನ್ನೂ  ಮುಂದುವರೆಯುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಈಗಾಗಲೇ ಎಚ್ಚರಿಕೆಯನ್ನೂ ನೀಡಿದೆ. ಇನ್ನು ಮೂರು ದಿನ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ನಿಂತಿಲ್ಲ ಮಳೆಯಾರ್ಭಟ, ಯಾವ್ಯಾವ ಜಿಲ್ಲೆಗಳಿಗೆ ರಜೆ?

ನೆರೆ ಸಂತ್ರಸ್ತರ ನೆರವಿಗೆ ಧಾವಿಸಿ ಎಂದು ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಮನವಿ ಮಾಡಿಕೊಂಡಿದ್ದಾರೆ. ಟ್ವೀಟ್ ಮಾಡಿರುವ ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ನಮ್ಮ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ ಹಲವು ಹಳ್ಳಿಗಳು ಪ್ರವಾಹದ ಅಬ್ಬರಕ್ಕೆ ನೀರಿನಲ್ಲಿ ಮುಳುಗಿ ಹೋಗಿವೆ. ಅಲ್ಲಿರುವ ಜನರಿಗೆ ಆಸರೆಯಾಗಿ ನಿಲ್ಲುವುದು ಪ್ರತಿಯೊಬ್ಬ ಮನುಷ್ಯನ ಕರ್ತವ್ಯವಾಗಿರುತ್ತದೆ. ಎಲ್ಲರೂ ತಮ್ಮ ಕೈಲಾದ ಸೇವೆಯನ್ನು ಮಾಡಬೇಕು ಎಂದು ಮನವಿ ಮಾಡಿದ್ದಾರೆ.