ಮೈಸೂರಿನಲ್ಲಿ ನಡೆಯಲಿರುವ  83ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕನ್ನಡ ಹೋರಾಟಗಾರ ಚಂದ್ರಶೇಖರ ಪಾಟೀಲ್ ಆಯ್ಕೆಯಾಗಿದ್ದಾರೆ.

ಬೆಂಗಳೂರು (ಸೆ.24): ಮೈಸೂರಿನಲ್ಲಿ ನಡೆಯಲಿರುವ 83ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕನ್ನಡ ಹೋರಾಟಗಾರ ಚಂದ್ರಶೇಖರ ಪಾಟೀಲ್ ಆಯ್ಕೆಯಾಗಿದ್ದಾರೆ.

ಮಂಗಳೂರು ಹೊರವಲಯದ ಕೇರಳ-ಕರ್ನಾಟಕ ಗಡಿ ಭಾಗದ ತಲಪಾಡಿಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ 101ನೇ ವಾರ್ಷಿಕ ಸಭೆಯಲ್ಲಿ ಒಮ್ಮತದ ನಿರ್ಣಯದಲ್ಲಿ ಚಂದ್ರಶೇಖರ್ ಪಾಟೀಲರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಘೋಷಣೆ ಮಾಡಿದ್ದಾರೆ.