ಮಾಜಿ ಶಾಸಕ ಸತ್ಯನಾರಾಯಣ ಅವರು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. 

ಮೈಸೂರು :  ಚಾಮುಂಡೇಶ್ವರಿ ಕ್ಷೇತ್ರದ ಮಾಜಿ ಶಾಸಕ ಎಂ.ಸತ್ಯನಾರಾಯಣ (74) ಅವರು ಗುರುವಾರ ರಾತ್ರಿ ನಿಧನರಾದರು. 

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಇಲವಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ರಾತ್ರಿ 11.10ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

ಸತ್ಯನಾರಾಯಣ ಅವರು 2008ರಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಾಂಗ್ರೆಸ್‌ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ 2013ರಲ್ಲಿ ಜಿ.ಟಿ.ದೇವೇಗೌಡ ಅವರ ವಿರುದ್ಧ ಸ್ಪರ್ಧಿಸಿ ಸೋಲುಂಡಿದ್ದರು. 

ಸತ್ಯನಾರಾಯಣ ಅವರು ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದು, ಸಜ್ಜನ ರಾಜಕಾರಣಿ ಎಂದು ಹೆಸರುಗಳಿಸಿದ್ದರು. ಅಂತ್ಯಕ್ರಿಯೆ ಶುಕ್ರವಾರ ನಡೆಯಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.