Asianet Suvarna News Asianet Suvarna News

ಸ್ವತಂತ್ರ ದಿನಾಚರಣೆಯನ್ನು ಮುಗಿಸಿ ವಾಪಸ್ಸಾಗುವಾಗ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಸ್ವತಂತ್ರ ದಿನಾಚರಣೆಯನ್ನು ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ 8 ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವಾಗಿರುವ ಘಟನೆ ಚಂಡೀಗಢದಲ್ಲಿ ನಡೆದಿದೆ.

Chandigarh  Class 8 student raped while returning from Independence Day celebration in school

ಚಂಡೀಗಢ (ಆ.15): ಸ್ವತಂತ್ರ ದಿನಾಚರಣೆಯನ್ನು ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ 8 ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವಾಗಿರುವ ಘಟನೆ ಚಂಡೀಗಢದಲ್ಲಿ ನಡೆದಿದೆ.

ಬೆಳಿಗ್ಗೆ 11 ಗಂಟೆ ಸುಮಾರಿಗೆ ವಿದ್ಯಾರ್ಥಿನಿಯು ಸ್ವತಂತ್ರ ದಿನಾಚರಣೆಯನ್ನು ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿ ಏಕಾಏಕಿ ದಾಳಿ ಮಾಡಿ ಅತ್ಯಾಚಾರವೆಸಗಲು ಮುಂದಾಗಿದ್ದಾನೆ. ಅವನಿಂದ ಹೇಗೋ ತಪ್ಪಿಸಿಕೊಂಡು ಆ ವಿದ್ಯಾರ್ಥಿನಿ ಮನೆಗೆ ಹೋಗಿ ಪೋಷಕರಿಗೆ ವಿಷಯವನ್ನು ಮುಟ್ಟಿಸಿದ್ದಾಳೆ. ಕೂಡಲೇ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬೇರೆ ಬೇರೆ ಸೆಕ್ಷನ್ ಅಡಿಯಲ್ಲಿ ಎಫ್’ಐಆರ್ ದಾಖಲಿಸಲಾಗಿದೆ. ಸಂತ್ರಸ್ಥೆಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ತನಿಖೆ ನಡೆಯುತ್ತಿದ್ದು ಆರೋಪಿಯನ್ನು ಪತ್ತೆ ಹಚ್ಚಲು ಹೆಚ್ಚಿನ ನಿಗಾ ವಹಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  

Latest Videos
Follow Us:
Download App:
  • android
  • ios