ಚಂಢೀಗಡ(ಅ.06): ಕೇಂದ್ರಾಡಳಿತ ಪ್ರದೇಶವಾದ ಚಂಢೀಗಡದ ಮೇಲೆ ಉಗ್ರರು ದಾಳಿ ನಡೆಸುವ ಸಾಧ್ಯತೆಯಿದೆ ಎಂಬ ಗುಪ್ತಚರ ಇಲಾಖೆ ನೀಡಿದ ಮಾಹಿತಿ ಆಧರಿಸಿ ಹೈ ಅಲರ್ಟ್ ಘೋಷಿಸಲಾಗಿದೆ.
ಈ ಕುರಿತು ಸ್ಪಷ್ಟನೆ ನೀಡಿರುವ ಗೃಹ ಸಚಿವಾಲಯದ ಕಾರ್ಯದರ್ಶಿ ಅನುರಾಗ್ ಅಗರ್'ವಾಲ್, ದಾಳಿ ನಡೆಯುವ ಸಾಧ್ಯತೆಯ ಕುರಿತಂತೆ ಗುಪ್ತಚರ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ, ಹಾಗಾಗಿ ಚಂಢೀಗಡ ಪೊಲೀಸರಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಯಾವುದೇ ಅನುಸ್ಪಾಪದ ವ್ಯಕ್ತಿಗಳು ಕಂಡುಬಂದರೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಕೋರಲಾಗಿದೆ ಎಂದವರು ತಿಳಿಸಿದ್ದಾರೆ.
ಚಂಢೀಗಡವು ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಿಗೆ ಜಂಟಿ ರಾಜಧಾನಿಯಾಗಿದೆ. ಸಾಕಷ್ಟು ಪ್ರವಾಸಿಗರು ಭೇಟಿ ನೀಡುವ ಚಂಢೀಗಡಕ್ಕೆ ಉಗ್ರರು ದಾಳಿ ನಡೆಸುವ ಸಾಧ್ಯತೆಯನ್ನು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿತ್ತು.
