ಮುಂದಿನ ಲೋಕಸಭಾ ಚುನಾವಣೆ ಯಲ್ಲಿ ಬಿಜೆಪಿಯನ್ನು ಸೋಲಿಸುವ ಉದ್ದೇಶದಿಂದ ಮಹಾ ಮೈತ್ರಿಕೂಟ ರಚನೆಯ ಪ್ರಯತ್ನಗಳು ಮುಂದುವರಿದಿವೆ.

ನವದೆಹಲಿ: 2019ರ ಲೋಕಸಭಾ ಚುನಾವಣೆ ಯಲ್ಲಿ ಬಿಜೆಪಿಯನ್ನು ಸೋಲಿಸುವ ಉದ್ದೇಶದಿಂದ ಮಹಾ ಮೈತ್ರಿಕೂಟ ರಚನೆಯ ಪ್ರಯತ್ನಗಳು ಮುಂದುವರಿದಿವೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದರ ಅಂಗವಾಗಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ವಿವಿಧ ರಾಷ್ಟ್ರೀಯ ನಾಯಕರನ್ನು ಶನಿವಾರ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಬಿಎಸ್‌ಪಿ ನಾಯಕಿ ಮಾಯಾವತಿ, ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ, ಆಮ್ ಆದ್ಮಿ ಪಕ್ಷದ ಸಂಚಾಲಕ ಕೇಜ್ರಿವಾಲ್, ಬಂಡು ಕೋರ ಜೆಡಿಯು ನೇತಾರ ಶರದ್ ಯಾದವ್, ಬಂಡುಕೋರ ಬಿಜೆಪಿ ಮುಖಂಡ ಯಶವಂತ ಸಿನ್ಹಾರನ್ನು ನಾಯ್ಡುಭೇಟಿ ಮಾಡಿದರು