‘ಜೀವನ ಟಾನಿಕ್‌ ಬಾಟ್ಲು ಕುಡಿಯೋಕ್‌ ಮುಂಚೆ ಅಲ್ಲಾಡ್ಸು.. ಅಲ್ಲಾಡ್ಸು ...’ ಹಾಡಿಗೆ ಕುಣಿದು ಸಾಮಾಜಿಕ ಜಾಲತಾಣದಲ್ಲಿ ಖ್ಯಾತಿ ಪಡೆದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಹೋಲುವ ಚನ್ನಮಾಯೀಗೌಡ ಈಗ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಮೈಸೂರು: ‘ಜೀವನ ಟಾನಿಕ್‌ ಬಾಟ್ಲು ಕುಡಿಯೋಕ್‌ ಮುಂಚೆ ಅಲ್ಲಾಡ್ಸು.. ಅಲ್ಲಾಡ್ಸು ...’ ಹಾಡಿಗೆ ಕುಣಿದು ಸಾಮಾಜಿಕ ಜಾಲತಾಣದಲ್ಲಿ ಖ್ಯಾತಿ ಪಡೆದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಹೋಲುವ ಚನ್ನಮಾಯೀಗೌಡ ಈಗ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಮೈಸೂರಿನ ವಿಜಯನಗರದಲ್ಲಿರುವ ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರ ನಿವಾಸದಲ್ಲಿ ಚನ್ನಮಾಯಿಗೌಡ ಅವರು ಸಚಿವರನ್ನು ಭೇಟಿಯಾಗಿ, ಕಾಂಗ್ರೆಸ್‌ ಪಕ್ಷಕ್ಕೆ ಅಧಿಕೃತವಾಗಿ ಸೇರಿಕೊಂಡರು.

ಟಿ.ನರಸೀಪುರ ತಾಲೂಕು ಬನ್ನೂರು ಹೋಬಳಿ ಮಾಕನಹಳ್ಳಿಯ ಪ್ರಗತಿಪರ ರೈತರಾದ ಚನ್ನಮಾಯೀಗೌಡ ಅವರು 2013ನೇ ಸಾಲಿನ ವಿಧಾನಸಭಾ ಚುನಾವಣೆಯಲ್ಲಿ ವರುಣ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಈ ಬಾರಿಯ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧವೇ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದರು. ಆದರೆ ಈಗ ಕಾಂಗ್ರೆಸ್‌ ಸೇರಿದ್ದಾರೆ