ರೈಲು ತಡವಾಗಿ ಹೊರಡುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿರುವುದರ ಹಿನ್ನೆಲೆಯಲ್ಲಿ ರೈಲ್ವೇ ಸಚಿವ ಸುರೇಶ್ ಪ್ರಭು ಸಂಬಂಧಪಟ್ಟ ಅಧಿಕಾರಿಗಳಿಗೆ ಸಮಯಪಾಲನೆ ಮಾಡಿ ಇಲ್ಲದಿದ್ದರೆ ಕ್ರಮ ಎದುರಿಸಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ನವದೆಹಲಿ (ಏ.18): ರೈಲು ತಡವಾಗಿ ಹೊರಡುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿರುವುದರ ಹಿನ್ನೆಲೆಯಲ್ಲಿ ರೈಲ್ವೇ ಸಚಿವ ಸುರೇಶ್ ಪ್ರಭು ಸಂಬಂಧಪಟ್ಟ ಅಧಿಕಾರಿಗಳಿಗೆ ಸಮಯಪಾಲನೆ ಮಾಡಿ ಇಲ್ಲದಿದ್ದರೆ ಕ್ರಮ ಎದುರಿಸಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 7 ಗಂಟೆವರೆಗೆ ಪಾಳಿಯಲ್ಲಿರುವ ಆಯಾವಲಯದ ಹಿರಿಯ ಅಧಿಕಾರಿಗಳಿಗೆ ಸಮಸ್ಯೆಗಳ ಬಗ್ಗೆ ಕೂಡಲೇ ಪರಿಶೀಲನೆ ನಡೆಸಿ. ರೈಲು ತಡವಾಗಿ ಹೊರಡುವುದನ್ನು ನಿಲ್ಲಿಸಿ ಎಂದು ಹೇಳಿದ್ದಾರೆ.

ಕಳೆದ ವರ್ಷ ಸಮಯಪಾಲನೆ ದರವು ಶೇ.84 ರಷ್ಟಿದ್ದು, ಈ ವರ್ಷ ಶೇ.79 ಕ್ಕೆ ಕುಸಿದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 5 ರಷ್ಟು ಕುಸಿದಿದೆ. ಈ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುರೇಶ್ ಪ್ರಭು, ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.