ಕಾಂಗ್ರೆಸ್ ಮುಖಂಡ ಚೆಲುವರಾಯಸ್ವಾಮಿ ಅವರನ್ನು ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ ಹೊಗಳಿದ್ದು ಅವರಿಗೆ ಉತ್ತಮ ಭವಿಷ್ಯವಿದೆ ಎಂದು ಹೊಗಳಿದ್ದಾರೆ. 

ನಾಗಮಂಗಲ/ಶಿವಮೊಗ್ಗ: ಜಿಲ್ಲೆಯ ಹಿರಿಯ ಮುಖಂಡ, ಮಾಜಿ ಸಚಿವ ಎನ್‌.ಚಲುವರಾಯಸ್ವಾಮಿ ಅವರಿಗೆ ಅಪಮಾನ ಮಾಡಿ ಹಗುರವಾಗಿ ಮಾತನಾಡಿರುವ ಜೆಡಿಎಸ್‌, ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿಗೆ ಮತದಾರರು ಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

ಲೋಕಸಭಾ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಚಲುವರಾಯಸ್ವಾಮಿ ಅವರಿಗೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವಿದೆ. ನಿಮ್ಮ ನಾಯಕನಿಗೆ ಅಪಮಾನ ಮಾಡಿದವರಿಗೆ ತಕ್ಕ ಪಾಠ ಕಲಿಸಲು ಇದೊಂದು ಒಳ್ಳೆಯ ಅವಕಾಶ. ಚಲುವರಾಯಸ್ವಾಮಿ ಸ್ನೇಹಿತರು ಹಾಗೂ ಬೆಂಬಲಿಗರು ಈ ಬಾರಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡಬೇಕು ಎಂದು ತಿಳಿಸಿದರು.

ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷದ ಮುಖಂಡರು ಪಕ್ಷದ ಅಭ್ಯರ್ಥಿ ಎಲ್‌.ಆರ್‌.ಶಿವರಾಮೇಗೌಡ ಪರ ಮತಯಾಚನೆ ಮಾಡುತ್ತಿಲ್ಲ. ಇದು ಬಿಜೆಪಿ ಅಭ್ಯರ್ಥಿಗೆ ಲಾಭವಾಗಲಿದೆ. ಸಿಎಂ ರೈತರ ಸಾಲ ಮನ್ನಾ ಮಾಡದೆ ಹಾಗೂ ಯಾವುದೇ ಅಭಿವೃದ್ಧಿ ಕೆಲಸವನ್ನು ಕೈಗೊಳ್ಳದೇ ಜನರನ್ನು ವಂಚಿಸುತ್ತಿದ್ದಾರೆ ಎಂದು ಆರೋಪಿಸಿದರು.