ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಮಾಯಣ್ಣ, ಔಷಧ ವ್ಯಾಪಾರಿಗಳ ಹಿತರಕ್ಷಣೆಗಾಗಿ ಆನ್‌ಲೈನ್‌ ಔಷಧ ಮಾರಾಟ ವಿರೋಧಿಸಿ ದೇಶಾದ್ಯಂತ ಮೇ 30ರಂದು ಒಂದು ದಿನದ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಯಲಿದೆ. ಸಂಘದ ವತಿಯಿಂದ ಬೆಂಗಳೂರಿನ ಪುರಭವನ ಮುಂಭಾಗ ಬೆಳಗ್ಗೆ 10ರಿಂದ 1ರವರೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅಂದು ಯಾವುದೇ ವ್ಯಾಪಾರ ವಹಿವಾಟು ಇರುವುದಿಲ್ಲ ಎಂದು ಹೇಳಿದರು.

ಆನ್‌ಲೈನ್‌ ಮೂಲಕ ಔಷಧ ಮಾರಾಟ ವಿರೋಧಿಸಿ ಮೇ 30ರಂದು ರಾಜ್ಯಾದ್ಯಂತ 28 ಸಾವಿರ ಔಷಧ ಅಂಗಡಿಗಳು ಬಂದ್‌ ಆಗಲಿವೆ. ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘವು ಕರೆ ನೀಡಿರುವ ಈ ಬಂದ್‌ಗೆ ಬೃಹತ್‌ ಬೆಂಗಳೂರು ಕೆಮಿಸ್ಟ್ಸ್ ಆ್ಯಂಡ್‌ ಡ್ರಗ್ಗಿಸ್ಟ್ಸ್ ಸಂಘ ಸಹ ಸಂಪೂರ್ಣ ಬೆಂಬಲ ನೀಡಿದೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಮಾಯಣ್ಣ, ಔಷಧ ವ್ಯಾಪಾರಿಗಳ ಹಿತರಕ್ಷಣೆಗಾಗಿ ಆನ್‌ಲೈನ್‌ ಔಷಧ ಮಾರಾಟ ವಿರೋಧಿಸಿ ದೇಶಾದ್ಯಂತ ಮೇ 30ರಂದು ಒಂದು ದಿನದ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಯಲಿದೆ. ಸಂಘದ ವತಿಯಿಂದ ಬೆಂಗಳೂರಿನ ಪುರಭವನ ಮುಂಭಾಗ ಬೆಳಗ್ಗೆ 10ರಿಂದ 1ರವರೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅಂದು ಯಾವುದೇ ವ್ಯಾಪಾರ ವಹಿವಾಟು ಇರುವುದಿಲ್ಲ ಎಂದು ಹೇಳಿದರು.

ಆನ್‌ಲೈನ್‌ ಮೂಲಕ ನಡೆಯುವ ಔಷಧ ಮಾರಾಟದಿಂದ ಕಳಪೆ ಗುಣಮಟ್ಟದ ಔಷಧ ಮತ್ತು ಬಳಕೆಯ ವಿಧಿ ವಿಧಾನದ ಮಾಹಿತಿ ಕೊರತೆಯಿಂದಾಗಿ ರೋಗಿಗಳ ಮೇಲೆ ಮಾರಕ ಪರಿಣಾಮ ಉಂಟಾಗುತ್ತದೆ. ಯಾವುದೇ ಅಡೆತಡೆಗಳಿಲ್ಲದೆ ಸುಲಭವಾಗಿ ಸಿಗುವ ಮಾದಕ ಹಾಗೂ ಪ್ರತಿಬಂಧಕ ಔಷಧಗಳ ಮಾರಾಟ ಸಮಾಜಕ್ಕೆ ಮಾರಕವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇದೇ ಉದ್ಯಮವನ್ನು ನಂಬಿ ಜೀವಿಸುತ್ತಿರುವ 50 ಲಕ್ಷಕ್ಕೂ ಹೆಚ್ಚಿನ ನೌಕರರು, 1.5 ಕೋಟಿ ಅವಲಂಬಿತ ಕುಟುಂಬಗಳು ಆನ್‌ಲೈನ್‌ ವ್ಯವಸ್ಥೆಯಿಂದ ವ್ಯತಿರಿಕ್ತ ಪರಿಣಾಮ ಎದುರಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಮೇ 30ರಂದು ದೇಶಾದ್ಯಂತ ಇರುವ 8.5 ಲಕ್ಷಕ್ಕೂ ಅಧಿಕ ಔಷಧ ವ್ಯಾಪಾರಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.