ಚಲನಚಿತ್ರ ಮಂದಿರದಲ್ಲಿ ಚಿತ್ರ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆ ಹಾಡುವಾಗ ಗೌರವಸೂಚಕವಾಗಿ ಎದ್ದು ನಿಲ್ಲದ 7 ಮಂದಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಚೆನ್ನೈ (ಡಿ.12): ಚಲನಚಿತ್ರ ಮಂದಿರಲ್ಲಿ ಚಿತ್ರ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆ ಹಾಡುವಾಗ ಗೌರವಸೂಚಕವಾಗಿ ಎದ್ದು ನಿಲ್ಲದ 7 ಮಂದಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಚೆನ್ನೈನ ಅಶೋಕ ನಗರದಲ್ಲಿರುವ ಚಿತ್ರಮಂದಿರದಲ್ಲಿ ಈ ಘಟನೆ ನಡೆದಿದೆ. ರಾಷ್ಟ್ರಗೀತೆ ಹಾಡುವ ವೇಳೆ 7 ಮಂದಿ ಸೆಲ್ಫೀ ತೆಗೆದುಕೊಳ್ಳುವುದರಲ್ಲ ಬ್ಯುಸಿಯಾಗಿದ್ದರು. ಎದ್ದು ನಿಲ್ಲದೇ ಅಗೌರವ ಸೂಚಿಸಿದ್ದಾರೆ ಎನ್ನಲಾಗಿದೆ.
ಚಲನಚಿತ್ರ ಮಂದಿರಗಳಲ್ಲಿ ಚಿತ್ರ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆಯನ್ನು ನುಡಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಈ ಆದೇಶವನ್ನು ಉಲ್ಲಂಘನೆ ಮಾಡಿದ ಮೊದಲ ಪ್ರಕರಣ ಇದಾಗಿದೆ.
ರಾಷ್ಟ್ರೀಯ ಮನ್ನಣೆ ಅವಮಾನ ತಡೆ ಕಾಯ್ದೆ 1971 ರ ಅನ್ವಯ ಚೆನ್ನೈ ಪೋಲಿಸರು ಪ್ರಕರಣ ದಾಖಲಿಸಿದ್ದಾರೆ.
