ಕಾಂಚಿಪುರಂ[ಮಾ.07]: ಚೆನ್ನೈ ಸೆಂಟ್ರಲ್‌ ರೈಲ್ವೆ ನಿಲ್ದಾಣಕ್ಕೆ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಮತ್ತು ರಾಜ್ಯ ಕಂಡ ಅತ್ಯಂತ ಜನಪ್ರಿಯ ರಾಜಕಾರಣಿ ಎಂ.ಜಿ.ರಾಮಚಂದ್ರನ್‌ ಅವರ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ತಮಿಳುನಾಡಿನಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಜೊತೆ ಮೈತ್ರಿ ಘೋಷಣೆ ಬೆನ್ನಲ್ಲೇ, ಆ ಪಕ್ಷದ ಹಿರಿಯ ನಾಯಕರ ಹೆಸರನ್ನು ರೈಲ್ವೆ ನಿಲ್ದಾಣಕ್ಕೆ ಇಡುವ ಘೋಷಣೆ ಮಾಡಿದ್ದಾರೆ.

ಇದೇ ವೇಳೆ ತಮಿಳುನಾಡಿಗೆ ಬರುವ ಮತ್ತು ಅಲ್ಲಿಂದ ಹೊರಡುವ ವಿಮಾನಗಳಲ್ಲಿ ಸ್ಥಳೀಯ ಭಾಷೆಯಲ್ಲೇ ಪ್ರಕಟಣೆ ಹೊರಡಿಸುವ ಕುರಿತು ಗಂಭೀರ ಚಿಂತನೆ ನಡೆಸಲಾಗಿದೆ ಎಂದರು.