ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಸಂತಾಪ ಸೂಚಕ ಸಭೆಯಲ್ಲಿ ಇಬ್ಬರು ಸಚಿವರು ನಗುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಈ ದೃಶ್ಯವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ರಾಯ್ಪುರ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಸಂತಾಪ ಸೂಚಕ ಸಭೆಯಲ್ಲಿ ಛತ್ತೀಸ್‌ಗಢದ ಇಬ್ಬರು ಸಚಿವರು ನಗುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಈ ದೃಶ್ಯವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಿಜೆಪಿ ಸರ್ಕಾರದ ಮುಜುಗರಕ್ಕೆ ಕಾರಣವಾಗಿದೆ.
ವಾಜಪೇಯಿ ಅವರ ಅಸ್ಥಿಯನ್ನು ನದಿಗೆ ಬಿಡುವ ಸಲುವಾಗಿ ಬುಧವಾರದಂದು ಸಂತಾಪ ಸೂಚಕ ಸಭೆಯನ್ನು ಆಯೋಜಿಸಲಾಗಿತ್ತು. ಈ ವೇಳೆ, ಕೃಷಿ ಸಿಚಿವ ಬ್ರಿಜ್‌ಮೋಹನ್ ಅಗರ್ವಾಲ್ ಮತ್ತು ಆರೋಗ್ಯ ಸಚಿವ ಅಜಯ್ ಚಂದ್ರಕರ್ ಅವರು ವೇದಿಕೆಯ ಮೇಲೆ ಹಾಸ್ಯ ಚಟಾಕಿ ಹಾರಿಸುತ್ತಾ ಕೈ ತಟ್ಟಿ, ಬಿದ್ದೂಬಿದ್ದು ನಗುತ್ತಿರುವುದು ಕಂಡು ಬಂದಿದೆ.
ಇದನ್ನು ಗಮನಿಸಿದ ಬಿಜೆಪಿ ಮುಖ್ಯಸ್ಥ ಧರ್ಮಲಾಲ್ ಕೌಶಿಕ್ ಚಂದ್ರ ಶೇಖರ್ ಅವರ ಕೈ ಹಿಡಿದು ನಗದಂತೆ ಎಚ್ಚರಿಸಿದ್ದಾರೆ. ಈ ಸಭೆಯಲ್ಲಿ ಮುಖ್ಯಮಂತ್ರಿ ರಮಣ್ ಸಿಂಗ್ ಅವರು ಕೂಡ ಭಾಗಿಯಾಗಿದ್ದರು.
