ಬೆಂಗಳೂರು(ಸೆ.21): ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುವ ವಿಚಾರ ಸಮಾಲೋಚನೆ ನಡೆಸುವ ಸಲುವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ಬೆಂಗಳೂರಿನ ಪದ್ಮನಾಭನಗರದ ಮನೆಯಲ್ಲಿ ದೇವೇಗೌಡ ಅವರನ್ನು ಭೇಟಿ ಮಾಡಿದ ಸಿಎಂ, ಕಾವೇರಿ ನೀರು ಬಿಡುವ ವಿಚಾರ ಚರ್ಚಿಸಲಿದ್ದಾರೆ.
ಸಿಎಂ ಆದ ಬಳಿಕ ಮೊದಲ ಬಾರಿ ದೇವೇಗೌಡರ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಮಹದೇವಪ್ಪ ಉಪಸ್ಥಿತರಿದ್ದರು.
