ಈ ಕುರಿತಂತೆ ಖಚಿತ ಮಾಹಿತಿಯ ಮೇರೆಗೆ ಮಹಿಳಾ ಮತ್ತು ಮಕ್ಕಳ ಇಲಾಖೆಯ ಡಿಡಿ ವಿಜಯ ಕುಮಾರ್ ನೇತೃತ್ವದ ತಂಡ ದಾಳಿ ಮಾಡಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ದಾವಣಗೆರೆ(ಡಿ.28): ಹುಟ್ಟಿ ಮೂರೇ ದಿನಕ್ಕೆ ಹೆಣ್ಣು ಮಗುವನ್ನು 20 ಸಾವಿರ ರುಪಾಯಿಗೆ ಮಾರಾಟ ಮಾಡಿದ ಆಘಾತಕಾರಿ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.
ಶಭೀನಾ - ಸಿಕಂದರ್ ದಂಪತಿಯೇ ಹೆಣ್ಣು ಮಗುವನ್ನು ಮಾರಾಟ ಮಾಡಿದ ಪೋಷಕರು. ಹಣದಾಸೆಗೆ ಮುಖ್ತಾರ್ ಎಂಬ ವ್ಯಕ್ತಿಗೆ ಈ ದಂಪತಿ ಹೆಣ್ಣು ಮಗುವನ್ನು ಕೇವಲ 20 ಸಾವಿರ ರುಪಾಯಿಗೆ ಮಾರಾಟ ಮಾಡಿದ್ದಾರೆ ಎನ್ನಲಾಗಿದೆ.
ಈ ಕುರಿತಂತೆ ಖಚಿತ ಮಾಹಿತಿಯ ಮೇರೆಗೆ ಮಹಿಳಾ ಮತ್ತು ಮಕ್ಕಳ ಇಲಾಖೆಯ ಡಿಡಿ ವಿಜಯ ಕುಮಾರ್ ನೇತೃತ್ವದ ತಂಡ ದಾಳಿ ಮಾಡಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ದಾವಣೆಗೆರೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
