ಸಿಚುವಾನ್ ಪ್ರಾಂತ್ಯದ ಗುವಾಂಗ್ಯುವಾನ್ ನಗರದ ಸಮೀಪದ ಗುಡ್ಡಗಾಡು ಪ್ರದೇಶದಲ್ಲಿ ಮಂಗಳವಾರ ಸಂಜೆ ಈ ಭೂಕಂಪ ಸಂಭವಿಸಿದೆ. ಕಂಪನದ ಪ್ರದೇಶವು ನೈಸರ್ಗಿಕವಾಗಿ ಸಂಪದ್ಭರಿತವಾಗಿದ್ದು, ಪ್ರವಾಸಿಗರ ಆಕರ್ಷಣೆಯ ತಾಣವಾಗಿದೆ. ಇಲ್ಲಿ ದಿನವೂ ಸಾವಿರಾರು ಪ್ರವಾಸಿಗರು ಭೇಟಿ ಕೊಡುತ್ತಾರೆ. ಭೂಕಂಪದಿಂದಾಗಿ ಭೂಕುಸಿತ ಉಂಟಾಗಿದ್ದು, ಸುಮಾರು 100 ಪ್ರವಾಸಿಗರು ಇದರಲ್ಲಿ ಸಿಲುಕಿರಬಹುದೆಂದು ಶಂಕಿಸಲಾಗಿದೆ. 30 ಸಾವಿರಕ್ಕೂ ಹೆಚ್ಚು ಪ್ರವಾಸಿಗರನ್ನು ಕಂಪನದ ಪ್ರದೇಶದಿಂದ ಬೇರೆಡೆಗೆ ಸಾಗಿಸಲಾಗಿದೆ ಎಂದು ಅಲ್ಲಿಯ ಅಧಿಕಾರಿಗಳು ತಿಳಿಸಿದ್ದಾರೆ.

ಶಾಂಘೈ(ಆ. 09): ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಭೂಕಂಪ ಸಂಭಿಸಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ, 164 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪ್ರಾಂತ್ಯದ ಸರಕಾರ ಹೇಳಿಕೆ ನೀಡಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ. ಅಷ್ಟೇ ಅಲ್ಲ, ನೂರಾರು ಪ್ರವಾಸಿಗರು ಭೂಕುಸಿತಕ್ಕೆ ಸಿಲುಕಿರುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಅಮೆರಿಕದ ಭೂಸರ್ವೇಕ್ಷಣಾ ಇಲಾಖೆಯ ಪ್ರಕಾರ ಭೂಕಂಪವು ರಿಕ್ಟರ್ ಮಾಪಕದಲ್ಲಿ 7.0 ಇದೆ ಎನ್ನಲಾಗಿದೆ. ಸಿಚುವಾನ್ ಪ್ರಾಂತ್ಯದ ಗುವಾಂಗ್ಯುವಾನ್ ನಗರದ ಸಮೀಪದ ಗುಡ್ಡಗಾಡು ಪ್ರದೇಶದಲ್ಲಿ ಮಂಗಳವಾರ ಸಂಜೆ ಈ ಭೂಕಂಪ ಸಂಭವಿಸಿದೆ. ಕಂಪನದ ಪ್ರದೇಶವು ನೈಸರ್ಗಿಕವಾಗಿ ಸಂಪದ್ಭರಿತವಾಗಿದ್ದು, ಪ್ರವಾಸಿಗರ ಆಕರ್ಷಣೆಯ ತಾಣವಾಗಿದೆ. ಇಲ್ಲಿ ದಿನವೂ ಸಾವಿರಾರು ಪ್ರವಾಸಿಗರು ಭೇಟಿ ಕೊಡುತ್ತಾರೆ. ಭೂಕಂಪದಿಂದಾಗಿ ಭೂಕುಸಿತ ಉಂಟಾಗಿದ್ದು, ಸುಮಾರು 100 ಪ್ರವಾಸಿಗರು ಇದರಲ್ಲಿ ಸಿಲುಕಿರಬಹುದೆಂದು ಶಂಕಿಸಲಾಗಿದೆ. 30 ಸಾವಿರಕ್ಕೂ ಹೆಚ್ಚು ಪ್ರವಾಸಿಗರನ್ನು ಕಂಪನದ ಪ್ರದೇಶದಿಂದ ಬೇರೆಡೆಗೆ ಸಾಗಿಸಲಾಗಿದೆ ಎಂದು ಅಲ್ಲಿಯ ಅಧಿಕಾರಿಗಳು ತಿಳಿಸಿದ್ದಾರೆ.