ಅಮೆರಿಕ ರಾಯಭಾರಿ ಕಚೇರಿ ಬಳಿ ಬಾಂಬ್ ಸ್ಫೋಟ
ಬಾಂಬ್ ವಾರ್ ಆಗಿ ಬದಲಾದ ಕೋಲ್ಡ್ ವಾರ್
ವೀಸಾ ಸಂದರ್ಶನದ ವೇಳೆ ಪ್ರಬಲ ಬಾಂಬ್ ಸ್ಫೋಟ
ಪಕ್ಕದಲ್ಲೇ ಇರುವ ಭಾರತೀಯ ರಾಯಭಾರ ಕಚೇರಿ
ಭಾರತೀಯ ಅಧಿಕಾರಿಗಳು ಸುರಕ್ಷಿತವಾಗಿದ್ದಾರೆ
ಬಿಜಿಂಗ್(ಜು.26): ಚೀನಾ ರಾಜಧಾನಿ ಬೀಜಿಂಗ್ ನಲ್ಲಿರುವ ಅಮೆರಿಕಾ ರಾಯಭಾರಿ ಕಚೇರಿ ಸಮೀಪ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದೆ. ಇಂದು ಬೆಳಿಗ್ಗೆ 11 ಗಂಟೆ ವೇಳೆಗೆ ಅಮೆರಿಕ ರಾಯಭಾರಿ ಕಚೇರಿ ಬಳಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ಅಮೆರಿಕ ರಾಯಭಾರಿ ಕಚೇರಿ ಸಮೀಪವೇ ಭಾರತೀಯ ರಾಯಭಾರಿ ಕಚೇರಿ ಕೂಡ ಇದ್ದು, ಎಲ್ಲರೂ ಕ್ಷೇಮವಾಗಿದ್ದಾರೆಂದು ಭಾರತೀಯ ಅಧಿಕಾರಿಗಳು ಅಧಿಕಾರಿಗಳು ತಿಳಿಸಿದ್ದಾರೆ. ಬಾಂಬ್ ಸ್ಫೋಟ ಸಂಭವಿಸಿದ ಸ್ಥಳದ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸ್ಥಳದ ಸುತ್ತಲೂ ದಟ್ಟ ಕಪ್ಪು ಹೊಗೆ ಆವರಿಸಿರುವುದು ಕಂಡು ಬಂದಿದೆ.
#WATCH Visuals from outside the US Embassy in #Beijing soon after the blast. #China pic.twitter.com/fP6mZZpk7m
— ANI (@ANI) July 26, 2018
ವೀಸಾ ಸಂದರ್ಶನಕ್ಕಾಗಿ ಅಮೆರಿಕ ರಾಯಭಾರಿ ಕಚೇರಿಯ ಹೊರಗೆ ಜನ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಲು ಅಮೆರಿಕ ರಾಯಭಾರಿ ಕಚೇರಿ ನಿರಾಕರಿಸಿದೆ. ಸ್ಫೋಟ ಸಂಭವಿಸಿದ ಸ್ಥಳ ಬೀಜಿಂಗ್ ಹೊರವಲಯದಲ್ಲಿದ್ದು, ಇಲ್ಲಿ ಭಾರತ ಸೇರಿ ಅನೇಕ ರಾಷ್ಟ್ರಗಳ ರಾಯಭಾರಿ ಕಚೇರಿಗಳೂ ಕೂಡ ಇವೆ.

Last Updated 26, Jul 2018, 6:24 PM IST