ಗಾಯಾಳು ಪ್ರಕಾಶ್ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿತ್ರದುರ್ಗ(ಆ.17): ಪೊಲೀಸ್ ಪೇದೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿ ದರೋಡೆ ಮಾಡಿದ ಘಟನೆ ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದಿದೆ.

,ಐಮಂಗಲ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಪೇದೆ ಪ್ರಕಾಶ್ ಚಿತ್ರದುರ್ಗ ದ ಖಾಸಗಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ತಮ್ಮ ದ್ವಿಚಕ್ರ ತರಲು ಹೋದಾಗ ಅಪರಿಚಿತನೊಬ್ಬ ಚಾಕುವಿನಿಂದ ಹಲ್ಲೆ ಮಾಡಿ ಪ್ರಕಾಶರ ಬಳಿಯಿದ್ದ ನಗದು, ಚಿನ್ನದ ಸರ ಹಾಗೂ ಮೊಬೈಲ್'ಅನ್ನು ದೋಚಿ ಪರಾರಿಯಾಗಿದ್ದಾನೆ.ಗಾಯಾಳು ಪ್ರಕಾಶ್ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.