Asianet Suvarna News Asianet Suvarna News

ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್ ನೀಡಿದ ಶಿವರಾಜ್ ಸಿಂಗ್ ಚೌಹಾಣ್

ಬಹುಕೋಟಿ ವ್ಯಾಪಂ ಹಗರಣದಲ್ಲಿ ಹರಾಜಾದ ರಾಜ್ಯದ ಶಿಕ್ಷಣ ಇಲಾಖೆಯ ಗೌರವ, ಪ್ರತಿಷ್ಠೆಯನ್ನು ಮರಳಿ ತರಲು ಪಣತೊಟ್ಟಿರುವ ಸಿಎಂ ಚೌಹಾಣ್, ಸಿಬಿಎಸ್​ಸಿ ಪಠ್ಯಕ್ರಮದಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕಗಳಿಗೆ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಶುಲ್ಕವನ್ನೂ ಭರಿಸುವ ಭರವಸೆ ನೀಡಿದ್ದಾರೆ.

Chouhan assures students all help

ಭೋಪಾಲ್(ಆ.21): ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ವರ್ಷ ಬಾಕಿ ಇರುವಂತೆಯೇ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ವಿದ್ಯಾರ್ಥಿಗಳಿಗೆ ಭರ್ಜರಿ ಗಿಫ್ಟ್​ ನೀಡಿದ್ದಾರೆ.

12ನೇ ತರಗತಿಯಲ್ಲಿ ಶೇ.75ಕ್ಕಿಂತ ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಭರವಸೆ ನೀಡಿದ್ದಾರೆ.  ಬಹುಕೋಟಿ ವ್ಯಾಪಂ ಹಗರಣದಲ್ಲಿ ಹರಾಜಾದ ರಾಜ್ಯದ ಶಿಕ್ಷಣ ಇಲಾಖೆಯ ಗೌರವ, ಪ್ರತಿಷ್ಠೆಯನ್ನು ಮರಳಿ ತರಲು ಪಣತೊಟ್ಟಿರುವ ಸಿಎಂ ಚೌಹಾಣ್, ಸಿಬಿಎಸ್​ಸಿ ಪಠ್ಯಕ್ರಮದಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕಗಳಿಗೆ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಶುಲ್ಕವನ್ನೂ ಭರಿಸುವ ಭರವಸೆ ನೀಡಿದ್ದಾರೆ.

ಆರ್ಥಿಕ ತೊಂದರೆಯಿಂದಾಗಿಯೇ ರಾಜ್ಯದಲ್ಲಿ ಹಲವರು 12ನೇ ತರಗತಿ ಬಳಿಕ ಶಿಕ್ಷಣ ತೊರೆಯುತ್ತಿದ್ದಾರೆ. ಇದನ್ನು ತಪ್ಪಿಸಲು ಈ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ರು. ಅಲ್ದೇ ಅರಣ್ಯ ಇಲಾಖೆ ಹೊರತು ಪಡಿಸಿ ಸರ್ಕಾರದ ಉಳಿದೆಲ್ಲ ವಿಭಾಗಗಳಲ್ಲೂ ಮಹಿಳೆಯರಿಗೆ ಶೇ.33 ಮೀಸಲು ಘೋಷಿಸಿದ್ದಾರೆ.

Follow Us:
Download App:
  • android
  • ios