ಸಾಮಾಜಿಕ ಜಾಲತಾಣ ಟ್ವಿಟರ್‌'ನಲ್ಲಿ ಈ ವಿಷಯ ಬಹಿರಂಗಪಡಿಸಿರುವ ಗೇಲ್‌, ಆಸ್ಪತ್ರೆ ಬೆಡ್ ಮೇಲೆ ಮಲಗಿರುವ ಫೋಟೋವನ್ನು ಅಪ್ಲೋಡ್ ಮಾಡಿದ್ದಾರೆ. ಗೇಲ್‌ ಯಾವ ಕಾರಣಕ್ಕಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಕುರಿತು ಖಚಿತ ಮಾಹಿತಿ ಹೊರಬಿದ್ದಿಲ್ಲ.
ಸೇಂಟ್ ಲೂಸಿಯಾ(ಜ.10): ವೆಸ್ಟ್ ಇಂಡೀಸ್ ತಂಡದ ದೈತ್ಯ ಬ್ಯಾಟ್ಸ್ಮನ್ ಕ್ರಿಸ್ ಗೇಲ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್'ನಲ್ಲಿ ಈ ವಿಷಯ ಬಹಿರಂಗಪಡಿಸಿರುವ ಗೇಲ್, ಆಸ್ಪತ್ರೆ ಬೆಡ್ ಮೇಲೆ ಮಲಗಿರುವ ಫೋಟೋವನ್ನು ಅಪ್ಲೋಡ್ ಮಾಡಿದ್ದಾರೆ. ಗೇಲ್ ಯಾವ ಕಾರಣಕ್ಕಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಕುರಿತು ಖಚಿತ ಮಾಹಿತಿ ಹೊರಬಿದ್ದಿಲ್ಲ.
ಆಸ್ಪತ್ರೆಯಲ್ಲಿ ಡ್ರಿಪ್ಸ್ ಹಾಕಿಸಿಕೊಂಡು ಚಿಕಿತ್ಸೆ ಪಡೆಯುತ್ತಿರುವ ಫೋಟೋವನ್ನು ಅವರು ಅಪ್ಲೋಡ್ ಮಾಡಿದ್ದಾರೆ. ಅವರು ಆಸ್ಪತ್ರೆ ಸೇರಿರುವ ವಿಚಾರ ಟ್ವಿಟರ್'ನಲ್ಲಿ ಹರಿದಾಡುತ್ತಿದ್ದಂತೆ ಟೀಂ ಇಂಡಿಯಾದ ಮಾಜಿ ಸ್ಫೋಟಕ ಆಟಗಾರ ವೀರೇಂದ್ರ ಸೆಹ್ವಾಗ್ ಟ್ವಿಟರ್ ಮೂಲಕ ಅವರ ಆರೋಗ್ಯ ವಿಚಾರಿಸಿದ್ದಾರೆ.
