ರಾಹುಲ್ ಸಮಾವೇಶದ ವೇಳೆಯೇ ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ

First Published 25, Feb 2018, 5:57 PM IST
Clashes Between Congress Leaders In Bagalkot
Highlights

ಬಾಗಲಕೋಟೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮಾವೇಶ ಮುಗಿಯುತ್ತಲೇ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ನಡೆದ ಜನಾಶಿರ್ವಾದದ ಸಭೆ ಬಳಿಕ ಈ ಘಟನೆ ನಡೆದಿದೆ.

ಬಾಗಲಕೋಟೆ : ಬಾಗಲಕೋಟೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮಾವೇಶ ಮುಗಿಯುತ್ತಲೇ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ನಡೆದ ಜನಾಶಿರ್ವಾದದ ಸಭೆ ಬಳಿಕ ಈ ಘಟನೆ ನಡೆದಿದೆ.

ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ. ಬೀಳಗಿ ಪಟ್ಟಣದ ಅಕ್ಕಪಕ್ಕದ ರಸ್ತೆಯಲ್ಲಿ ಕಟ್ಟಿ ಹಾಕಿದ್ದ ಬ್ಯಾನರ್’ಗಳಿಗಾಗಿ ಜಗಳ ನಡೆದಿದೆ.

ಬೀಳಗಿಯಲ್ಲಿ ಸಮಾವೇಶ ಮುಗಿಸಿ ರಾಹುಲ್ ನಿರ್ಗಮಿಸುತ್ತಲೇ ಕಾರ್ಯಕರ್ತರ ಮಧ್ಯೆ ತೀವ್ರ ವಾಗ್ವಾದ ನಡೆದು ಗಲಾಟೆಯಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

loader