ಸಿಬಿಎಸ್ಇ 12ನೇ ತರಗತಿ ಅಕೌಂಟೆನ್ಸಿ ವಿಷಯದ ಪ್ರಶ್ನೆ  ಪತ್ರಿಕೆ ಸೋರಿಕೆಯಾಗಿದೆ.  ಪ್ರಶ್ನೆ ಪತ್ರಿಕೆ  ವಾಟ್ಸಾಪ್ ಮೂಲಕ ಹರಿದಾಡುತ್ತಿದೆ.

ನವದೆಹಲಿ : ಸಿಬಿಎಸ್ಇ 12ನೇ ತರಗತಿ ಅಕೌಂಟೆನ್ಸಿ ವಿಷಯದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಪ್ರಶ್ನೆ ಪತ್ರಿಕೆ ವಾಟ್ಸಾಪ್ ಮೂಲಕ ಹರಿದಾಡುತ್ತಿದೆ.

ಲೀಕ್ ಆಗಿರುವ ಪ್ರಶ್ನೆ ಪತ್ರಿಕೆ ಸಿಬಿಎಸ್’ಸಿಯ 12ನೇ ತರಗತಿಯ ಪ್ರಶ್ನೆ ಪತ್ರಿಕೆ ಎರಡನೇ ಸೆಟ್’ಗೆ ಹೋಲಿಕೆಯಾಗುತ್ತಿದೆ. ಈ ಸಂಬಂಧ ಇದೀಗ ತನಿಖೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಜ್ಞರ ಸಮಿತಿ ಹೇಳಿದೆ.

ದಿಲ್ಲಿಯ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯ ಟ್ವೀಟ್ ಮಾಡಿ ಈ ಸಂಬಂಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಿರ್ಲಕ್ಷ್ಯದಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಹೇಳಿದ್ದಾರೆ.