ಚಿಕ್ಕಮಗಳೂರು(ಅ.5): ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ತೇಜಸ್ ಗೌಡನ ಅಪಹರಣ ಪ್ರಕರಣದ ಕುರಿತು ಸಿಐಡಿ ಅಧಿಕಾರಿಗಳು ಚಿಕ್ಕಮಗಳೂರು ನ್ಯಾಯಾಲಯಕ್ಕೆ ಚಾರ್ಚ್ ಶೀಟ್ ಸಲ್ಲಿಸಿದ್ದಾರೆ. ಹಣಕ್ಕಾಗಿ ತೇಜಸ್ ಗೌಡ ಕಿಡ್ನಾಪ್ ಪ್ರಕರಣದ ನಾಲ್ಕನೇ ಆರೋಪಿ ಡಿವೈಎಸ್ಪಿ ಕಲ್ಲಪ್ಪ'ಗೆ ಕ್ಲೀನ್ ಚೀಟ್ ನೀಡಲಾಗಿದೆ ಎನ್ನುವ ಮಾಹಿತಿ ಬಹಿರಂಗವಾಗಿದೆ. ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ನಿರ್ದೋಷಿ ಎಂದು ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ ಎನ್ನುವ ಮಾಹಿತಿ ಹೊರಬಂದಿದೆ. ಸಿಐಡಿ ಅಧಿಕಾರಿಗಳು ಚಿಕ್ಕಮಗಳೂರು ಜೆಎಂಎಫ್ ಸಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿರೋದನ್ನ ಆರೋಪಿ ಪ್ರವೀಣ್ ಖಾಂಡ್ಯ ಪರ ವಕೀಲ ರವೀಂದ್ರ ದೃಢಪಡಿಸಿದ್ದಾರೆ. ಅಲ್ಲದೆ ಪ್ರಕರಣದ 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು 400 ಪುಟಗಳ ವರದಿಯಲ್ಲಿ ಸಿಐಡಿ ಅಧಿಕಾರಿಗಳು ಸಲ್ಲಿಸಿದ್ದಾರೆ.

