ಇಂದು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ  ಅಂಗನವಾಡಿ ಕಾರ್ಯಕರ್ತೆಯರ ಗೌರವಧನದಲ್ಲಿ 2016-17ಕ್ಕೆ ಹೋಲಿಸಿದರೆ ತಿಂಗಳಿಗೆ ರೂ.2000 ಸಾವಿರ, ಸಹಾಯಕಿಯರಿಗೆ ರೂ. 1000 ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು (ಏ.10): ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಗಳ ಮುಖಂಡರೊಂದಿಗೆ ಸರ್ಕಾರವು ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು, ಕಾರ್ಯಕರ್ತೆಯರು, ಸಹಾಯಕಿಯರ ವೇತನದಲ್ಲಿ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವಧನದಲ್ಲಿ 2016-17ಕ್ಕೆ ಹೋಲಿಸಿದರೆ ತಿಂಗಳಿಗೆ ರೂ.2000 ಸಾವಿರ, ಸಹಾಯಕಿಯರಿಗೆ ರೂ. 1000 ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕಳೆದ ತಿಂಗಳು ಅಹೋರಾತ್ರಿ ಧರಣಿ ನಡೆಸುವ ಮೂಲಕ ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು ದೇಶದಾದ್ಯಂತ ಗಮನ ಸೆಳೆದಿದ್ದರು . ಉಪ ಚುನಾವಣೆ ಮುಗಿಯುತ್ತಿದ್ದಂತೆ ಬೇಡಿಕೆ ಈಡೇರಿಸುವ ಭರವಸೆಯನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದರು .

ಒಂದುವಾರಗಳ ಕಾಲ ಅಹೋರಾತ್ರಿ ಧರಣಿ ನಡೆಸಿದ್ದ ಕಾರ್ಯಕರ್ತೆಯರು , ಕನಿಷ್ಠ ವೇತನ ಹೆಚ್ಚಳ, ಮತ್ತು ಕೆಲಸದ ಸಮಯ ಕಡಿತಗೊಳಿಸುವಂತೆ ಆಗ್ರಹಿಸಿದ್ದರು.