ಉತ್ತರಪ್ರದೇಶದಲ್ಲಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಕೇಂದ್ರ ಸರ್ಕಾರ ನೀಡಿದ ಅನುದಾನದಿಂದ ಅಲ್ಲಿ ಸಾಲ ಮನ್ನಾ ಸಾಧ್ಯವಾಗಿದೆ. ನಮ್ಮ ನಿಲುವು ಇಷ್ಟೆ, ಕೇಂದ್ರ ಸರ್ಕಾರ ಮೊದಲು ಸಾಲ ಮನ್ನಾ ಮಾಡಲಿ, ನಂತರ ನಾವು ಸಾಲ ಮನ್ನಾ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ : ರಾಜ್ಯ ಸರ್ಕಾರ ಸಂಕಷ್ಟದಲ್ಲಿರುವ ರೈತರ ಸಾಲ ಮನ್ನಾ ಮಾಡದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಯಡಿಯೂರಪ್ಪ ಪುನರುಚ್ಚರಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರತಿಭಟನೆ ವೇಳೆ ಕಾನೂನು- ಸುವ್ಯವಸ್ಥೆ ಹದಗೆಟ್ಟರೆ ರಾಜ್ಯ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದರು.

ಉತ್ತರ ಪ್ರದೇಶದಲ್ಲಿ ಸಾಲ ಮನ್ನಾ ಮಾಡಿದಂತೆ ರಾಜ್ಯದಲ್ಲೂ ರೈತರ ಸಾಲ ಮನ್ನಾ ಮಾಡಬೇಕು. ಹಿಂದೆ ನಾನು ಎರಡು ಬಾರಿ ಸಾಲ ಮನ್ನಾ ಮಾಡಿದ್ದೆ. ರಾಜ್ಯದ ಅಭಿವೃದ್ಧಿ ಪ್ರಶ್ನೆ ಬಂದಾಗ ನಾವೆಂದೂ ರಾಜಕಾರಣ ಮಾಡಿಲ್ಲ ಎಂದು ಅವರು ಹೇಳಿದರು.

ಬಿಎಸ್‌ವೈ ಪ್ರತಿಭಟನೆ ನೋಡಿದ್ದೇನೆ: ಸಿಎಂ

‘ಬಿಜೆಪಿ ಮತ್ತು ಯಡಿಯೂರಪ್ಪನವರ ಪ್ರತಿಭಟನೆಯನ್ನು ಬಹಳ ವರ್ಷಗಳಿಂದ ನೋಡಿದ್ದೇನೆ. ಯಡಿಯೂರಪ್ಪನ ವರದು ಎರಡು ನಾಲಿಗೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

‘ಸಾಲ ಮನ್ನಾ ಮಾಡದಿದ್ದರೆ ಹೋರಾಟ' ಮಾಡುವು ದಾಗಿ ಯಡಿ ಯೂರಪ್ಪ ಅವರು ನೀಡಿದ ಎಚ್ಚರಿಕೆಗೆ ಕಿಡಿಕಾರಿದರು.

ಉತ್ತರಪ್ರದೇಶದಲ್ಲಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಕೇಂದ್ರ ಸರ್ಕಾರ ನೀಡಿದ ಅನುದಾನದಿಂದ ಅಲ್ಲಿ ಸಾಲ ಮನ್ನಾ ಸಾಧ್ಯವಾಗಿದೆ. ನಮ್ಮ ನಿಲುವು ಇಷ್ಟೆ, ಕೇಂದ್ರ ಸರ್ಕಾರ ಮೊದಲು ಸಾಲ ಮನ್ನಾ ಮಾಡಲಿ, ನಂತರ ನಾವು ಸಾಲ ಮನ್ನಾ ಮಾಡುತ್ತೇವೆ ಎಂದರು.