ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯವನರೆ ಅಭ್ಯರ್ಥಿಯನ್ನು ಘೋಷಿಸಿದ್ದಾರೆ.    

ಬೆಂಗಳೂರು(ಫೆ.12): ಮಾಜಿ ಸಚಿವ ದಿವಂಗತ ಮಹದೇವ್ ಪ್ರಸಾದ್ ಅವರ ನಿಧನದ ಹಿನ್ನಲೆಯಲ್ಲಿ ತೆರವಾಗಿದ್ದ ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರದ ಮರು ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ದಿ. ಮಹದೇವ್ ಪ್ರಸಾದ್ ಅವರ ಪತ್ನಿ ಗೀತಾ ಮಹದೇವ್ ಪ್ರಸಾದ್ ಅವರು ಸ್ಪರ್ಧಿಸಲಿದ್ದಾರೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನರೆ ಅಭ್ಯರ್ಥಿಯನ್ನು ಘೋಷಿಸಿದ್ದಾರೆ.