ಇತ್ತೀಚಿಗಷ್ಟೆ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯವತಿ ಕೂಡ ತಮ್ಮ ಪಕ್ಷದ ಸೋಲಿಗೆ ವಿದ್ಯುನ್ಮಾನ ಮತಯಂತ್ರಗಳೆ ಕಾರಣ ಎಂದು ಆರೋಪಿಸಿ ಮರು ಚುನಾವಣೆ ನಡೆಸುವಂತೆ ಆಗ್ರಹಿಸಿದ್ದರು.

ನವದೆಹಲಿ(ಮಾ.14): ಎಲ್ಲರೂ ಆಧುನಿಕ ತಂತ್ರಜ್ಞಾನದ ಮೊರೆ ಹೋಗುತ್ತಿದ್ದರೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತ್ರ ಹಳೆಯ ವಿಧಾನ ಬೇಕೆಂದು ಬಡಾಯಿಸುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅವರು ಹಳೆಯ ವಿಧಾನ ಬೇಕೆಂದು ಕೇಳುತ್ತಿರುವುದು ತನ್ನ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದಲ್ಲ. ರಾಜಕೀಯ ಕಾರಣಗಳಿಂದ. ಮುಂದಿನ ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ದೆಹಲಿ ಪಾಲಿಕೆ ಚುನಾವಣೆಯಲ್ಲಿ ವಿದ್ಯುನ್ಮಾನ ಯಂತ್ರಗಳ ಬದಲಿಗೆ ಬ್ಯಾಲೆಟ್ ಪತ್ರಗಳನ್ನು ಒದಗಿಸುವಂತೆ ರಾಜ್ಯ ಚುನಾವಣಾ ಆಯೋಗದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಮಾಡಿದ್ದಾರೆ.

ಇತ್ತೀಚಿಗಷ್ಟೆ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯವತಿ ಕೂಡ ತಮ್ಮ ಪಕ್ಷದ ಸೋಲಿಗೆ ವಿದ್ಯುನ್ಮಾನ ಮತಯಂತ್ರಗಳೆ ಕಾರಣ ಎಂದು ಆರೋಪಿಸಿ ಮರು ಚುನಾವಣೆ ನಡೆಸುವಂತೆ ಆಗ್ರಹಿಸಿದ್ದರು.