ಅಮಿತ್ ಶಾ ವಿರುದ್ಧ ಏಕವಚನದಲ್ಲಿ ವಾಗ್ದಾಳಿ : ಬಿಜೆಪಿ ನಾಯಕರಿಗೆ ಸಿಎಂ ಸವಾಲ್..!

First Published 4, Feb 2018, 1:21 PM IST
CM Attack Against Amith Shah
Highlights

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನುಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನದಲ್ಲಿ ನಿಂದಿಸಿದ್ದಾರೆ. ಅವನು ಯಾರು..? ಅಮಿತ್ ಶಾ ಸುಳ್ಳು ಹೇಳಿಕೊಂಡು ತಿರುಗಾಡಿದರೆ ಏನು ಮಾಡಲು ಆಗುತ್ತದೆ ಎಂದು ಹೇಳಿದ್ದಾರೆ.

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನುಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನದಲ್ಲಿ ನಿಂದಿಸಿದ್ದಾರೆ. ಅವನು ಯಾರು..? ಅಮಿತ್ ಶಾ ಸುಳ್ಳು ಹೇಳಿಕೊಂಡು ತಿರುಗಾಡಿದರೆ ಏನು ಮಾಡಲು ಆಗುತ್ತದೆ ಎಂದು ಹೇಳಿದ್ದಾರೆ.

ಅಲ್ಲದೆ ಸುಳ್ಳು ಹೇಳುವುದು, ಟೀಕೆ ಮಾಡುವುದು ಬಿಜೆಪಿಯವರ ಕೆಲಸವಾಗಿದೆ. ಸುಳ್ಳು ಹೇಳಿದರೆ  ಜನರು ನಂಬುವುದಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೋದಿ ಮಹದಾಯಿ ಬಗ್ಗೆ ಬೆಂಗಳೂರಿಗೆ ಆಗಮಿಸಿದ ವೇಳೆ ಮಾತನಾಡುತ್ತಾರೆ ಎನ್ನುವ ನಿರೀಕ್ಷೆ ಇದೆ. ನಿನ್ನೆ ದಿನೇಶ್ ಗುಂಡೂರಾವ್ ಹಾಗೂ ಕೃಷ್ಣ ಭೈರೇಗೌಡ ನೀಡಿದ  ಮಾಹಿತಿ ಸರಿ ಇದೆ.

ಬೇಕಿದ್ದರೆ ಬಿಜೆಪಿಯವರು ವಿಧಾನಸಭೆಯಲ್ಲಿ ಚಾಲೇಂಜ್ ಮಾಡಲಿ ಎಂದು ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ. ಯಾರೇ ಕೋಮು ಗಲಭೆ ಸೃಷ್ಟಿ ಮಾಡಲು ಯತ್ನಿಸಿದರೂ ಅವರನ್ನು ಬಿಡುವುದಿಲ್ಲ ಎಂದಿದ್ದಾರೆ.

loader