ಧಾರವಾಡ ಜಿಲ್ಲೆಯ ಅಣ್ಣಿಗೇರಿ, ಅಳ್ನಾವರ, ಮತ್ತು ಹುಬ್ಬಳ್ಳಿ ನಗರ, ಗದಗ ಜಿಲ್ಲೆಯ ಗಜೇಂದ್ರಗಢ ಹಾಗೂ ಲಕ್ಷ್ಮೇಶ್ವರ, ಕಲಬುರಗಿ ಜಿಲ್ಲೆಯ ಕಾಳಗಿ,

ಬೆಂಗಳೂರು(ಮಾ.15): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2017ರ ಆಯವ್ಯಯದಲ್ಲಿ ರಾಜ್ಯದ 21 ಜಿಲ್ಲೆಗಳಲ್ಲಿ 49 ಹೊಸ ತಾಲೂಕುಗಳನ್ನು ಘೋಷಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ, ರಬಕವಿ-ಬನಹಟ್ಟಿ, ಇಳಕಲ್, ಬೆಳಗಾವಿ ಜಿಲ್ಲೆಯ ನಿಪ್ಪಾಣಿ, ಮೂಡಲಗಿ ಹಾಗೂ ಕಾಗವಾಡ, ದಾವಣಗೆರೆ ಜಿಲ್ಲೆಯ ನ್ಯಾಮತಿ, ಬೀದರ್ ಜಿಲ್ಲೆಯ ಚಿಟಗುಪ್ಪ, ಹುಲಸೂರು, ಕಮಲಾನಗರ, ಬಳ್ಳಾರಿ ಜಿಲ್ಲೆಯ ಕುರುಗೋಡು, ಕೊಟ್ಟೂರು, ಕಂಪ್ಲಿ, ಧಾರವಾಡ ಜಿಲ್ಲೆಯ ಅಣ್ಣಿಗೇರಿ, ಅಳ್ನಾವರ, ಮತ್ತು ಹುಬ್ಬಳ್ಳಿ ನಗರ, ಗದಗ ಜಿಲ್ಲೆಯ ಗಜೇಂದ್ರಗಢ ಹಾಗೂ ಲಕ್ಷ್ಮೇಶ್ವರ, ಕಲಬುರಗಿ ಜಿಲ್ಲೆಯ ಕಾಳಗಿ, ಕಮಲಾಪುರ, ಯಡ್ರಾವಿ ಹಾಗೂ ಶಹಾಬಾದ್, ಯಾದಗಿರಿ ಜಿಲ್ಲೆಯ ಹುಣಸಗಿ, ವಡಗೆರ ಮತ್ತು ಗುರುಮಿಟ್ಕಲ್, ಕೊಪ್ಪಳ ಜಿಲ್ಲೆಯ ಕುಕನೂರು, ಕನಕಗಿರಿ ಹಾಗೂ ಕಾರಟಗಿ ರಾಯಚೂರು ಜಿಲ್ಲೆಯ ಮಸ್ಕಿ, ಸಿರವಾರ, ಉಡುಪಿ ಜಿಲ್ಲೆಯ ಬೈಂದೂರು, ಬ್ರಹ್ಮಾವರ ಹಾಗೂ ಕಾಪು ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆ, ಕಡಬ ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ಹೊಸ ತಾಲೂಕುಗಳನ್ನಾಗಿ ಘೋಷಿಸಲಾಗಿದೆ.