ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಜಾತಿ ಗಣತಿ ಸಮೀಕ್ಷೆ ಸೋರಿಕೆಯಾದ ಸಂಬಂಧ ವಿಚಾರಕ್ಕೆ ಎಲ್ಲೆಡೆ ವಿರೋಧ ವ್ಯಕ್ತವಾಗಿದೆ. ಜಾತಿ ಸಮೀಕ್ಷೆ ಬಹಿರಂಗವಾಗಿದ್ದಕ್ಕೆ ಸಿಎಂ ವ್ಯಘ್ರರಾಗಿದ್ದು, ಆಯೋಗದ ಅಧ್ಯಕ್ಷರನ್ನು ತರಾಟೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಬೆಂಗಳೂರು(ಮೇ.16): ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಜಾತಿ ಗಣತಿ ಸಮೀಕ್ಷೆ ಸೋರಿಕೆಯಾದ ಸಂಬಂಧ ವಿಚಾರಕ್ಕೆ ಎಲ್ಲೆಡೆ ವಿರೋಧ ವ್ಯಕ್ತವಾಗಿದೆ. ಜಾತಿ ಸಮೀಕ್ಷೆ ಬಹಿರಂಗವಾಗಿದ್ದಕ್ಕೆ ಸಿಎಂ ವ್ಯಘ್ರರಾಗಿದ್ದು, ಆಯೋಗದ ಅಧ್ಯಕ್ಷರನ್ನು ತರಾಟೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ವರದಿ ನೀಡುವಂತೆ ಆಯೋಗದ ಅಧ್ಯಕ್ಷ ಕಾಂತರಾಜುಗೆ ಸಿಎಂ ಆದೇಶ
ಮೊನ್ನೆಯಷ್ಟೇ ರಾಜ್ಯದಲ್ಲಿ ಪರಿಶಿಷ್ಟ ಜಾತಿಯ 1.08 ಕೋಟಿ ಮತ್ತು ಪರಿಶಿಷ್ಟ ಪಂಗಡದ 40.45 ಲಕ್ಷ, 70 ಲಕ್ಷ ಮುಸ್ಲಿಮರು ಹಾಗೂ ಹಿಂದುಳಿದ ಸಮುದಾಯಕ್ಕೆ ಸೇರಿದ ಕುರುಬರು 45 ಲಕ್ಷ ಸಂಖ್ಯೆಯಲ್ಲಿದ್ದಾರೆ’ ಎಂದು ಹೇಳಲಾಗಿತ್ತು. ‘ಸಾಮಾಜಿಕ ಮತ್ತು ಶೈಕ್ಷಣಿಕ ಅಳತೆಗೋಲಿನಲ್ಲಿ ಕುರುಬ ಸಮುದಾಯವನ್ನು ‘ಅತ್ಯಂತ ಹಿಂದುಳಿದ ಸಮುದಾಯ’ ಎಂಬುದಾಗಿ ಘೋಷಿಸಬೇಕು ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುವ ಮೂಲಕ ಬಹಿರಂಗಗೊಂಡಿತ್ತು. ಬಹಿರಂಗಗೊಂಡಿದ್ದೇ ತಡ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕಾಂತರಾಜುಗೆ ತೀವ್ರ ತರಾಟೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಜಾತಿ ಸಮೀಕ್ಷೆ ನಮ್ಮ ಸರ್ಕಾರದ ಮಹತ್ವಾಕಾಂಕ್ಷಿ ಸಮೀಕ್ಷೆ ವರದಿಯಾಗಿದೆ. ಇದು ಪಾಯಿಂಟು ಪಾಯಿಂಟ್ ಮಾಧ್ಯಮಕ್ಕೆ ಹೇಗೆ ಸಿಕ್ತು? ಕೊಟ್ಟಿದ್ದು ಯಾರು? ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಜೊತೆಗೆ ಆ ಬಗ್ಗೆ ಸಮಗ್ರ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ, ಸಿಎಂ ತಮ್ಮ ಆಪ್ತ ವಿಧಾನ ಪರಿಷತ್ ಸದಸ್ಯರನ್ನು ಆಯೋಗದ ಕಚೇರಿಗೆ ಕಳುಹಿಸಿ ಸಂಪೂರ್ಣ ಮಾಹಿತಿ ಪಡೆದುಕೊಳ್ಳುವಂತೆಯೂ ಹೇಳಿದ್ದರು ಎಂದು ಸಿಎಂ ಆಪ್ತರು ತಿಳಿಸಿದ್ದಾರೆ.
ಒಟ್ನಲ್ಲಿ ಸಮೀಕ್ಷೆ ಮೂಲಕ ಅಹಿಂದ ಸಮುದಾಯದ ಜನಸಂಖ್ಯೆಯನ್ನು ಹೆಚ್ಚಿಗೆ ತೋರಿಸಿದೆ ಎನ್ನುವ ಆರೋಪ ಕೂಡ ಕೇಳಿ ಬರಬಹುದು ಅನ್ನೋ ಭೀತಿ ಸಿದ್ದರಾಮಯ್ಯರನ್ನ ಕಾಡುತ್ತಿದೆ. ಅದಕ್ಕಾಗಿಯೇ ಸೀರಿಯಸ್ ಆಗಿ ಆಯೋಗದ ಅಧ್ಯಕ್ಷರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
