Asianet Suvarna News Asianet Suvarna News

ಕೊಡಗು ಪ್ರವಾಹ: ಮೂವರು ಮಂತ್ರಿಗಳಿಗೆ ಸಿಎಂ ನೀಡಿದ ಸೂಚನೆ ಏನು?

ಕೊಡಗು ಸಂತ್ರಸ್ತರ ನೆರವಿಗೆ ಧಾವಿಸಲು ಸಿಎಂ ಕುಮಾರಸ್ವಾಮಿ ಆದೇಶ ನೀಡಿದ್ದು ಅಧಿಕಾರಿಗಳಿಂದ ಕ್ಷಣ ಕ್ಷಣದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

CM H D Kumaraswamy instruct ministers to stay at Kodagu
Author
Bengaluru, First Published Aug 17, 2018, 7:55 PM IST

ಬೆಂಗಳೂರು[ಆ.17]   ಪ್ರವಾಹಪೀಡಿತ ಕೊಡಗಿನ ಕ್ಷಣ ಕ್ಷಣದ ಮಾಹಿತಿಯನ್ನು ಅಧಿಕಾರಿಗಳು ಸಿಎಂ ಗೆ ನೀಡುತ್ತಿದ್ದಾರೆ. ಮೂವರು ಸಚಿವರಿಗೆ ಸ್ಥಳದಲ್ಲೇ ಮೊಕ್ಕಾಂ ಹೂಡಲು ತಿಳಿಸಿದ್ದಾರೆ.

ಸಚಿವರಾದ ಆರ್.ವಿ.ದೇಶಪಾಂಡೆ, ಎಚ್.ಡಿ.ರೇವಣ್ಣ, ಸಾ.ರಾ.ಮಹೇಶ್ ಗೆ ಸ್ಥಳದಲ್ಲಿಯೇ ಇದ್ದು ಪರಿಹಾರ ಕಾರ್ಯದ ಮೇಲ್ವಿಚಾರಣೆ ನೋಡಿಕೊಳ್ಳುವಂತೆ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮತ್ತು ಸಚಿವರಿಂದ ಮಾಹಿತಿ ಪಡೆಯುತ್ತಿರುವ ಸಿಎಂ ಮುಂದಿನ ಕ್ರಮಗಳ ಬಗ್ಗೆಯೂ ಸೂಚನೆ ನೀಡಿದ್ದಾರೆ.

ಸಂತ್ರಸ್ತರಿಗೆ ಸಹಾಯವಾಣಿ

ಪ್ರತಿ ಒಂದು ಗಂಟೆಗೆ ಕೊಡಗು ಜಿಲ್ಲಾಡಳಿತ ಮಾಹಿತಿ ನೀಡುತ್ತಿದೆ. ಖಾಸಗಿಯವರ ಸಹಕಾರದೊಂದಿಗೆ ರಕ್ಷಣಾ ಕಾರ್ಯಾಚರಣೆ ಮಾಡಲು ನಿರ್ದೇಶನ ನೀಡಲಾಗಿದ್ದು ರಾಜ್ಯ ಮುಖ್ಯ ಕಾರ್ಯದರ್ಶಿ ರಕ್ಷಣಾ ಕಾರ್ಯಾಚರಣೆಯ ಮಾಹಿತಿ ಸಂಗ್ರಹ ಮಾಡಿಕೊಳ್ಳುತ್ತಿದ್ದಾರೆ.

ಸದ್ಯಕ್ಕೆ ಕೊಡಗು ಜಿಲ್ಲೆಯ ವೈಮಾನಿಕ ಸಮೀಕ್ಷೆ ಮಾಡದಿರಲು ಸಿಎಂ ಕುಮಾರಸ್ವಾಮಿ ತೀರ್ಮಾನ ಮಾಡಿದ್ದಾರಡೆ. ಸಿಎಂ ಪ್ರವಾಸ ಹೋದರೆ ಕಾರ್ಯಾಚರಣೆಯಲ್ಲಿ ನಿರತರಾಗಿರುವವರಿಗೆ ತೊಂದರೆ ಆಗುವ ಸಂಭವ ಇರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 

ಅಧಿಕಾರಿಗಳಿಂದ ಸಕಲ ಮಾಹಿತಿ ಬಂದ ಮೇಲೆ  ಹೆಚ್ಚುವರಿ ಪ್ಯಾಕೇಜ್ ನೀಡುವ ಬಗ್ಗೆಯೂ ತೀರ್ಮಾನ ಮಾಡಲಾಗುತ್ತದೆ. ಮೊದಲು ಕಾರ್ಯಾಚರಣೆ ಮುಗಿಸುವಂತೆ ಕೊಡಗು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ.

Follow Us:
Download App:
  • android
  • ios