ಮಕ್ಕಳ ಕಳ್ಳರ ಬಗ್ಗೆ ವದಂತಿ ಹಿನ್ನೆಲೆಯಲ್ಲಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮನವಿ 2 ವಾರಗಳ ಹಿಂದೆ ಈ ಬಗ್ಗೆ ಗಮನ ಸೆಳೆದಿದ್ದ suvarnanews.com
ಬೆಂಗಳೂರು: ಮಕ್ಕಳನ್ನು ಕಿಡ್ನಾಪ್ ಮಾಡುವವರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವದಂತಿಗಳಿಂದಾಗಿ ಈಗಾಗಲೇ ಆಂಧ್ರ ಪ್ರದೇಶ, ತೆಲಾಂಗಣ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಹಲವಾರು ಮಂದಿಯ ಹತ್ಯೆ ನಡೆದಿದೆ.
ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜ್ಯದ ಜನತೆಯೊಂದಿಗೆ ಮನವಿ ಮಾಡಿಕೊಂಡಿದ್ದು, ಅಂತಹ ಸಂದೇಶಗಳು ಆಧಾರರಹಿತವಾಗಿದ್ದು, ಸಾರ್ವಜನಿಕರು ಅವುಗಳನ್ನು ನಂಬಬಾರದೆಂದು ಮನವಿ ಮಾಡಿದ್ದಾರೆ. ಸೊಶಿಯಲ್ ಮೀಡಿಯಾದಲ್ಲಿ ಮಾಹಿತಿಗಳನ್ನು ಹಂಚುವಾಗ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಮುಖ್ಯಮಂತ್ರಿ ಎಚ್‌ಡಿಕೆ ಹೇಳಿದ್ದಾರೆ.
2 ವಾರಗಳ ಹಿಂದೆಯೇ ಈ ಬಗ್ಗೆ ಎಚ್ಚರಿಕೆ ವರದಿ ಪ್ರಕಟಿಸಿದ್ದ www.suvarnanews.com
ಬೆಂಗಳೂರು ಪೊಲೀಸರು ಕೂಡಾ ಈ ಬಗ್ಗೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.
