ಮೈಸೂರು, (ಮಾ.28): ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ರಾಜ್ಯದಲ್ಲಿ ಐಟಿ ದಾಳಿ ನಡೆದಿದ್ದು, ರಾಜಕೀಯ ನಾಯಕರು ಬೆಚ್ಚಿಬಿದ್ದಿದ್ದಾರೆ. ಇದು ರಾಜಕೀಯ ಹೈಡ್ರಾಮಕ್ಕೆ ತಿರುವು ಪಡೆದುಕೊಂಡಿದೆ.

ಇಂದು (ಗುರುವಾರ) ಬೆಳ್ಳಂಬೆಳಗ್ಗೆ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರ ಮೇಲೆ ಐಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಇದು ರಾಜಕೀಯ ಪ್ರೇರಿತ ಎಂದು ಕೇಂದ್ರ ಸರ್ಕಾದ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ.

ರಾಜಕಾರಣದಲ್ಲಿ ಅಲ್ಲೋಲ-ಕಲ್ಲೋಲ ತಂದ ಸಿಎಂ ಐಟಿ ಹೇಳಿಕೆ!

ಇನ್ನು  ಈ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ,  ಇಂದಿನಿಂದ ಬೆಂಗಳೂರಿನಲ್ಲಿ ಪ್ರತಿಭಟನೆ ಕೂರುತ್ತಿದ್ದೇನೆ. ನನ್ನೊಂದಿಗೆ   ಕಾಂಗ್ರೆಸ್, ಜೆಡಿಎಸ್ ನಾಯಕರು ಪಾಲ್ಗೊಳ್ಳುತ್ತಾರೆ.

ಐಟಿ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಕೆಲಸ ಮಾಡಬೇಕು. ಯಾರದ್ದೋ ಅನುಕೂಲಕ್ಕೆ,  ಮುಲಾಜಿಗೆ ಕೆಲಸ ಮಾಡಬಾರದು. ಐಟಿ ಅಧಿಕಾರಿ ಬಾಲಕೃಷ್ಣನ್ ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಆಗ್ರಹಿಸಿದರು. 

ಅಷ್ಟೇ ಅಲ್ಲದೇ ನಿಷ್ಪಕ್ಷಪಾತವಾಗಿ ಕೆಲಸ ಮಾಡುವ ಅಧಿಕಾರಿಯನ್ನು ನೇಮಿಸಬೇಕು. ಈ ಒತ್ತಾಯ ಮುಂದಿಟ್ಟಕೊಂಡು ಪ್ರತಿಭಟನೆ ಮಾಡುತ್ತೇನೆ. ಈ ವಿಚಾರ ದೇಶಕ್ಕೆ ಗೊತ್ತಾಗಲಿ ಎಂದರು.

ಒಟ್ಟಿನಲ್ಲಿ ಐಟಿ ದಾಳಿಯಿಂದ ಸಿಎಂ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದು, ಪಶ್ಚಿಮ ಬಂಗಾಳದ ಸಿಎಂ ಮಾದರಿಯಲ್ಲಿ ಪ್ರತಿಭಟನೆ ಮಾಡುವ ಮೂನ್ಸೂಚನೆ ನೀಡಿದ್ದಾರೆ. 

ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಲು ಸಿಬಿಐ ತಂಡ ಕೋಲ್ಕತ್ತಾ ಪೋಲಿಸ್ ಕಮಿಷನರ್ ರಾಜೀವ್ ಕುಮಾರ್ ಅವರ ನಿವಾಸಕ್ಕೆ ಆಗಮಿಸಿತ್ತು.

ಈ ವೇಳೆ ಸಿಬಿಐ ಅಧಿಕಾರಿಗಳನ್ನೇ ಕೋಲ್ಕತ್ತಾ ಪೊಲೀಸರು ಬಂಧಿಸಿದ್ದರು. ಇಷ್ಟಕ್ಕೆ ಸುಮ್ಮನಾಗದೇ ಬೃಹತ್ ಪ್ರತಿಭಟನೆ ಮಾಡಿದ್ದು, ದೊಡ್ಡ ಹೈಡ್ರಾಮಕ್ಕೆ ಕಾರಣವಾಗಿತ್ತು.