ಆಂಧ್ರದ ಕರ್ನೂಲ್ ಬಳಿ ಅಪಘಾತಕ್ಕೀಡಾದ ರಾಜ್ಯದ ಪ್ರವಾಸಿಗರನ್ನು ಸಿಎಂ ಕುಮಾರಸ್ವಾಮಿ ಸುರಕ್ಷಿತವಾಗಿ ಕರೆತರುವ ವ್ಯವಸ್ಥೆ ಮಾಡಿದ್ದಾರೆ.
ಕರ್ನೂಲ್(ಫೆ.22] ಮುಖ್ಯಮಂತ್ರಿಗಳ ಮಧ್ಯಪ್ರವೇಶದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಓರ್ವಕಲ್ ಎಂಬಲ್ಲಿ ಅಪಘಾತಕ್ಕೆ ಒಳಗಾದ ಮಂಡ್ಯ ಜಿಲ್ಲೆ ಬೆಳ್ಳೂರು ಗ್ರಾಮದ ಪ್ರವಾಸಿಗರನ್ನು ಸುರಕ್ಷಿತವಾಗಿ ವಾಪಸ್ ಕರೆತರಲು ವ್ಯವಸ್ಥೆ ಮಾಡಲಾಗಿದೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಗ್ರಾಮಸ್ಥರು ಒಂದು ಬಸ್ ನಲ್ಲಿ ಇದೆ ತಿಂಗಳ 18 ರಂದು ಪ್ರವಾಸ ಹೊರಟಿದ್ದರು. ಮಹಾನಂದಿ ದರ್ಶನ ಮುಗಿಸಿಕೊಂಡು ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿ ಗೋವಿಂದ ಸ್ವಾಮಿ ಎಂಬವರು ಮೃತಪಟ್ಟಿದ್ದಾರೆ. ಇನ್ನು 3 ಮಂದಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ವಿಷಯ ತಿಳಿದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕರ್ನೂಲ್ ಪೊಲೀಸ್ ವರಿಷ್ಠಾಧಿಕಾರಿ ಫಕ್ಕೀರಪ್ಪ ಕಾಗಿನೆಲೆ ಅವರನ್ನು ಸಂಪರ್ಕಿಸಿ ಇವರನ್ನು ಸುರಕ್ಷಿತವಾಗಿ ವಾಪಸ್ ಕಳುಹಿಸುವಂತೆ ಕೋರಿದ್ದು, ಕರ್ನಾಟಕ ಮೂಲದ ಈ ಅಧಿಕಾರಿ ಈ ಪ್ರಯಾಣಿಕರನ್ನು ಬಸ್ ವ್ಯವಸ್ಥೆ ಮಾಡಿ ಕಳುಹಿಸಲು ಕ್ರಮ ವಹಿಸಿದ್ದಾರೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 23, 2019, 12:09 AM IST