ಪ್ರಧಾನಿ ಭೇಟಿ : ಸಿಎಂ ಕುಮಾರಸ್ವಾಮಿ ಮಹತ್ವದ ಚರ್ಚೆ

First Published 19, Jun 2018, 7:48 AM IST
CM HD Kumaraswamy Meets PM Modi At Delhi
Highlights

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ ಅಕ್ಷರಶಃ ಧನಬೇಟೆ ನಡೆಸಿದ್ದಾರೆ. ರೈತರ ಸಾಲ ಮನ್ನಾ ಮಾಡಲೇಬೇಕಿರುವ ಒತ್ತಡದಲ್ಲಿರುವ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಸಾಲ ಮನ್ನಾ ಕಾರ್ಯಗತಗೊಳಿಸಲು ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿದ್ದಾರೆ. 
 

ನವದೆಹಲಿ : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ ಅಕ್ಷರಶಃ ಧನಬೇಟೆ ನಡೆಸಿದ್ದಾರೆ. ರೈತರ ಸಾಲ ಮನ್ನಾ ಮಾಡಲೇಬೇಕಿರುವ ಒತ್ತಡದಲ್ಲಿರುವ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಸಾಲ ಮನ್ನಾ ಕಾರ್ಯಗತಗೊಳಿಸಲು ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿದ್ದಾರೆ. 

ಇದೇ ವೇಳೆ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಪೊಲೀಸ್ ಇಲಾಖೆಯ ಅಭಿವೃದ್ಧಿ ಹಾಗೂ ರಾಜ್ಯ ವಿಪತ್ತು ಪರಿಹಾರ ನಿಧಿಗೆ ಹೆಚ್ಚುವರಿ ಹಣಕಾಸಿನ ನೆರವು ನೀಡುವಂತೆ ಮನವಿ ಮಾಡಿದ್ದಾರೆ. 

ಮತ್ತೊಂದು ಕಡೆ, ರಾಷ್ಟ್ರೀಯ ಹೆದ್ದಾರಿ ಖಾತೆಯನ್ನೂ ಹೊಂದಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ 34000 ಕೋಟಿ ರು. ಮೊತ್ತದ ರಸ್ತೆ ಅಭಿವೃದ್ಧಿ ಕಾಮಗಾರಿ ಕುರಿತು ಚರ್ಚೆ ನಡೆಸಿದ್ದಾರೆ.

loader